ಕಲಬುರಗಿ | ಸದೃಢ ದೇಹದಲ್ಲಿ ಸದೃಢ ಮನಸ್ಸು ಅಡಗಿದೆ: ಪ್ರೊ.ಗೂರು ಶ್ರೀರಾಮುಲು

ಕಲಬುರಗಿ : ಪಠ್ಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಉತ್ತಮ ಮತ್ತು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಪ್ರಭಾರ ಕುಲಪತಿ ಪ್ರೊ.ಗೂರು ಶ್ರೀರಾಮುಲು ಹೇಳಿದರು.
ಗುಲ್ಬರ್ಗಾ ವಿಶ್ವವಿದ್ಯಾಲಯ ಜ್ಞಾನ ಗಂಗಾ ಆವರಣ ಕ್ರೀಡಾಂಗಣದಲ್ಲಿ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟಗಳ ಸಂಹಯೋಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತೋತ್ಸವ ನಿಮಿತ್ತವಾಗಿ ಆಯೋಜಿಸಿದ "ವಿಸಿ ಕಪ್ ಕ್ರಿಕೆಟ್ ಪಂದ್ಯಾವಳಿ"ಗೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಯಲ್ಲಿ ಭಾಗವಹಿಸಬೇಕು. ಪಠ್ಯದ ಜೋತೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಉನ್ನತ ಮಟ್ಟದ ಸಾಧನೆ ಮಾಡಬಹುದು ಎಂದರು.
ಆಧುನಿಕತೆ ಭರಾಟೆಯಲ್ಲಿ ಕ್ರೀಡೆಗಳಲ್ಲಿ ಯುವಕರು ಭಾಗವಹಿಸುವಿಕೆ ಕಡಿಮೆ ಆಗುತ್ತಿರುವುದು ಕಳವಳಕಾರಿ ಸಂಗತಿ ಎಂದರು.
ಸ್ನಾತಕೋತ್ತರ ವಿವಿಧ ವಿಭಾಗಗಳ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ವಿಸಿ ಕಪ್ ಟೂರ್ನಮೆಂಟ್ ನಲ್ಲಿ ಭಾಗವಹಿಸಲಿದ್ದಾರೆ. ಸುಮಾರು 8 ದಿನಗಳ ಕಾಲ ಈ ಪಂದ್ಯಾವಳಿ ನಡೆಯಲಿದೆ.
ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷರಾದ ಆನಂದ್ ಮೈತ್ರಿ, ಉಪಾಧ್ಯಕ್ಷರಾದ ಕೇಮಣ್ಣ, ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಚಂದ್ರು ಸಂಗೋಳ್ಳಗಿ, ಉಪಾಧ್ಯಕ್ಷರಾದ ಶಿವಲಿಂಗಪ್ಪ ಶಿಂಧೆ, ರವಿ, ಆನಂದ್ ಯಾತನೂರ, ಸಾಯಿಬಣ್ಣ, ಸಚಿನ್ ಸಂತೋಷ, ರಾಚಯ್ಯ ಸ್ವಾಮಿ ಹೀರೆಮಠ ರಾಕೇಶ್, ಪ್ರವಿಣ ದೈಹಿಕ ಶಿಕ್ಷಣ ವಿಭಾಗದ ಶಿಕ್ಷಕರು ಮತ್ತು ಸಿಬ್ಬಂದಿಗಳು ಹಾಗೂ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.