ಕಲಬುರಗಿ | ನೇಣು ಬಿಗಿದು ಯುವಕ ಆತ್ಮಹತ್ಯೆ
ಕಲಬುರಗಿ : ಸರಕಾರಿ ಶಾಲೆಯ ಆವರಣದಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ನಡೆದಿದೆ.
ಮಹೀಬೂಬ್ (27) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಹಾಗರಗುಂಡಗಿ ಗ್ರಾಮದ ಶಾಲೆಯ ಆವರಣದಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story