ಕಲಬುರಗಿ | ವಿದ್ಯುತ್ ತಗುಲಿ ಯುವಕ ಮೃತ್ಯು
ಚಂದಪ್ಪ ದೊಡ್ಡಮನಿ
ಕಲಬುರಗಿ : ರಸ್ತೆ ಪಕ್ಕದಲ್ಲಿ ಅಳವಡಿಸಲಾದ ವಿದ್ಯುತ್ ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ವಾಡಿ ಪಟ್ಟಣದಲ್ಲಿ ನಡೆದಿದೆ.
ವಾಡಿ ಪಟ್ಟಣದ ಸಿದ್ದಾರ್ಥ ನಗರ ಬಡಾವಣೆಯ ನಿವಾಸಿ ಚಂದಪ್ಪ ದೊಡ್ಡಮನಿ (22) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಕಾಂಬವೀರ ಬಡಾವಣೆಯ ಮುಖ್ಯರಸ್ತೆ ಪಕ್ಕದಲ್ಲಿಯೇ ಅಳವಡಿಸಲಾದ ವಿದ್ಯುತ್ ಟ್ರಾನ್ಸ್ ಫಾರ್ಮ್ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ತಗುಲಿದ್ದು, ಯುವಕ ಚಂದಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ವಾಡಿ ಠಾಣೆಯ ಪಿಎಸ್ಐ ತಿರುಮಲೇಶ್ ಕೆ. ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story