ಕಲಬುರಗಿ | ಬೆಂಕಿ ಆಕಸ್ಮಿಕ : ಸುಟ್ಟು ಕರಕಲಾದ ವಾಹನ
ಕಲಬುರಗಿ : ಕಮಲಾಪುರ ತಾಲೂಕಿನ ಮಹಾಗಾಂವ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಮಹಾಗಾಂವ ಕಲ್ಯಾಣ ಮಂಟಪದ ಬಳಿ ರವಿವಾರ ತಡರಾತ್ರಿ ಟಾಟಾ ಮ್ಯಾಜಿಕ್ ವಾಹನಕ್ಕೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ನಡೆದಿದೆ.
ವಾಹನಕ್ಕೆ ಆಕಸ್ಮಿಕ ಬೆಂಕಿ ಹತ್ತಿರುವುದರಿಂದ ಚಾಲಕ ರಸ್ತೆಯ ಪಕ್ಕದಲ್ಲಿಯೇ ವಾಹನ ನಿಲ್ಲಿಸಿ, ವಾಹನದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದ ವಾಹನವು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕಲಬುರಗಿಯಿಂದ ಬಸವಕಲ್ಯಾಣಕ್ಕೆ ತೆರಳುತ್ತಿದ ವೇಳೆ ಈ ಘಟನೆ ನಡೆದಿರುವುದು ತಿಳಿದುಬಂದಿದೆ. ಮಹಾಗಾಂವ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Next Story