Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ದೇಶದಲ್ಲಿ ಸಮಾಜವಾದವನ್ನು...

ಕಲಬುರಗಿ | ದೇಶದಲ್ಲಿ ಸಮಾಜವಾದವನ್ನು ಸ್ಥಾಪಿಸುವ ಕನಸು ಕಂಡವರು ಭಗತ್‍ಸಿಂಗ್ : ಈಶ್ವರ ಕೆ.

ವಾರ್ತಾಭಾರತಿವಾರ್ತಾಭಾರತಿ5 April 2025 6:57 PM IST
share
ಕಲಬುರಗಿ | ದೇಶದಲ್ಲಿ ಸಮಾಜವಾದವನ್ನು ಸ್ಥಾಪಿಸುವ ಕನಸು ಕಂಡವರು ಭಗತ್‍ಸಿಂಗ್ : ಈಶ್ವರ ಕೆ.

ಕಲಬುರಗಿ : ಭಗತ್ ಸಿಂಗ್ ಕೇವಲ ಸ್ವಾತಂತ್ರ್ಯದ ಕನಸು ಕಾಣಲಿಲ್ಲ, ಬ್ರಿಟಿಷರ ನಂತರ ನಮ್ಮ ದೇಶದಲ್ಲಿ ಶೋಷಣೆ ರಹಿತ ವ್ಯವಸ್ಥೆಯಾದ ಸಮಾಜವಾದವನ್ನು ಸ್ಥಾಪಿಸುವ ಕನಸು ಕಂಡವರು ಎಂದು ಎಐಡಿವೈಓ ನ ಜಿಲ್ಲಾ ಕಾರ್ಯದರ್ಶಿ ಈಶ್ವರ ಕೆ. ಹೇಳಿದರು.

ಶಹಾಬಾದ್‌ ನಗರದ ಬಸವೇಶ್ವರ ವೃತ್ತದಲ್ಲಿ ಎಐಡಿವೈಓ ಸ್ಥಳೀಯ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಶಹೀದ್ ಭಗತ್ ಸಿಂಗ್ ಅವರ 94ನೇ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರಾಗಿ ಮಾತನಾಡಿದರು.

ದೇಶದಲ್ಲಿ ಮಾನವನಿಂದ ಮಾನವನ ಶೋಷಣೆ ಕೊನೆಗೊಂಡು ಎಲ್ಲರೂ ಶಿಕ್ಷಣ ಉದ್ಯೋಗ ಭದ್ರತೆ ಪಡೆಯುವಂತಾಗಲಿ ಎಂಬ ಕನಸನ್ನು ಭಗತ್ ಸಿಂಗ್ ಕಂಡರು. ಅಂತಹ ಒಂದು ಸಮಾಜವಾದಿ ಭಾರತದ ಕನಸನ್ನು ನನಸು ಮಾಡುವ ಜವಾಬ್ದಾರಿ ಇಂದು ನಮ್ಮ ಮೇಲಿದೆ. ಇಂದಿನ ಯುವಜನರು ಭಗತ್ ಸಿಂಗ್ ಅವರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು. ಇಂದು ಸಮಾಜದಲ್ಲಿ ಯುವಜನರು ಆನ್‍ಲೈನ್ ಗೆಮ್, ಅಶ್ಲೀಲ ಸಿನಿಮಾ-ಸಾಹಿತ್ಯಗಳಿಗೆ ಬಲಿಯಾಗುತ್ತಿದ್ದಾರೆ. ಈ ಬಂಡವಾಳಶಾಹಿ ವ್ಯವಸ್ಥೆಯ ಆಳ್ವಿಕರು ಯುವಜನರ ಬೆನ್ನೆಲುಬು ಮುರಿಯುವ ಹುನ್ನಾರಗಳನ್ನು ಮಾಡುತ್ತಿದ್ದಾರೆ. ಯುವಜನರು ಜಾತಿ-ಧರ್ಮಗಳ ಮೂಲಕ ಒಡೆಯದೆ ಒಗ್ಗಟ್ಟಾಗಿ ಈ ವ್ಯವಸ್ಥೆಯನ್ನು, ಈ ಹುನ್ನಾರವನ್ನು ಸೋಲಿಸಬೇಕೆಂದು ಕರೆ ನೀಡಿದರು.

ಎಐಡಿವೈಓ ನ ಜಿಲ್ಲಾಧ್ಯಕ್ಷರಾದ ಎಸ್. ಎಸ್. ಜಗನ್ನಾಥ್ ಹಾಗೂ ಎಐಎಮ್‍ಎಸ್‍ಎಸ್ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷರಾದ ಗುಂಡಮ್ಮಾ ಮಡಿವಾಳ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಸಿದ್ದು ಚೌದ್ರಿ, ನಗರ ಅಧ್ಯಕ್ಷರಾದ ರಘು ಪವಾರ್, ಆನಂದ ದಂಡಗೂಲ್ಕರ, ದೇವರಾಜ್ ಮಿರಲ್ಕರ್, ಚಂದ್ರಕಾಂತ ದೇವಕರ್, ಕಿರಣ್ ಮಾನೆ, ಅಜಯ್ ದೊರೆ, ಮಾಳಿಂಗರಾಯ ಪೂಜಾರಿ, ಮಲ್ಲು ದೊರೆ ಪಲ್ಲವಿ ಗುರೂಜಲ್ಕರ್ ಸುಕನ್ಯಾ ಹುನುಗುಂಟಾ ಹಾಗೂ ಅನೇಕ ಯುವಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X