ಕಲಬುರಗಿ: ಸೇತುವೆಗೆ ಬೊಲೆರೋ ಪಿಕಪ್ ಢಿಕ್ಕಿ; ಚಾಲಕ ಮೃತ್ಯು

ಕಲಬುರಗಿ: ಮೀನು ಸಾಗಾಟ ಮಾಡುತ್ತಿದ್ದ ಬೊಲೆರೋ ಪಿಕಪ್ ವಾಹನವೊಂದು ಸೇತುವೆಗೆ ಢಿಕ್ಕಿಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ತಾಲ್ಲೂಕಿನ ಬಳ್ಳೂರಗಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ನಲ್ಲಿ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ.
ಚಾಲಕನನ್ನು ಅಫಜಲಪುರ ತಾಲ್ಲೂಕಿನ ಬಂದರವಾಡ ಗ್ರಾಮದ ಅನಿಲ್ ದಶರಥ ಭೋವಿ(22) ಎಂದು ಗುರುತಿಸಲಾಗಿದೆ.
ಚಾಲಕ ಅನಿಲ್, ಬೊಲೆರೋ ಪಿಕಪ್ ವಾಹನದಲ್ಲಿ ಜೇವರ್ಗಿಯಿಂದ ಸೋಲಾಪುರದ ಕಡೆ ಮೀನು ಸಾಗಿಸುತ್ತಿದ್ದ ಎನ್ನಲಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನವು ಬಳ್ಳೂರಗಿ ಗ್ರಾಮದ ಬೈಪಾಸ್ ರಸ್ತೆಯಲ್ಲಿನ ಸಣ್ಣ ಸೇತುವೆ ಗೆ ಢಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಚಾಲಕ ಅನೀಲ್ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಮೃತದೇಹವನ್ನು ಅಫಜಲಪುರ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಂತರಿಸಲಾಗುವುದು' ಎಂದು ಅಫಜಲಪುರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.