ಕಲಬುರಗಿ| ಬಸ್ - ಲಾರಿ ಢಿಕ್ಕಿ: ಚಾಲಕನಿಗೆ ಗಂಭೀರ ಗಾಯ
ಕಲಬುರಗಿ : ಕೆಎಸ್ಆರ್ಟಿಸಿ ಬಸ್ ಗೆ - ಲಾರಿ ಡಿಕ್ಕಿಯಾಗಿ ಲಾರಿ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ಹೊರ ಜೇವರ್ಗಿ ರಸ್ತೆಯಲ್ಲಿ ನಡೆದಿದೆ.
ಲಾರಿ ಚಾಲಕ ಮಹೇಶ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಜೇವರ್ಗಿ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಜೇವರ್ಗಿ ಕಡೆ ಹೋಗುತ್ತಿದ್ದ ಬಸ್ ಅನ್ನು ಹಿಂದಿಕ್ಕುವಾಗ ನಿಯಂತ್ರಣ ತಪ್ಪಿ, ಲಾರಿ ಚಾಲಕ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆಯು ಸಂಚಾರಿ ಪೊಲೀಸ್ ಠಾಣೆ - 1 ರ ವ್ಯಾಪ್ತಿಯಲ್ಲಿ ನಡೆದಿದೆ.
Next Story