ಕಲಬುರಗಿ | ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಯತ್ನಾಳ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ : ಪ್ರವಾದಿ (ಸ.ಅ) ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಮುಸ್ಲಿಮ್ ಧಾರ್ಮಿಕ ಮುಖಂಡರು, ವಿವಿಧ ಸಂಘಟನೆಯ ಸದಸ್ಯರು ನಗರ ಮುಸ್ಲಿಮ್ ಚೌಕ್ ಬಳಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಶಾಸಕ ಯತ್ನಾಳ್, ಮುಸ್ಲಿಂ ಸಮುದಾಯದ ವಿರುದ್ಧ ಅನೇಕ ಬಾರಿ ಅವಹೇಳನಕಾರಿ ಹೇಳಿಕೆ ನೀಡಿ, ಪ್ರವಾದಿ ಅವರನ್ನು ನಿಂದಿಸುತ್ತಿದ್ದಾರೆ. ನಾವು ಗೌರವಿಸುವ ಪ್ರವಾದಿ ಅವರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಸಮುದಾಯಕ್ಕೆ ಧಕ್ಕೆ ತಂದಿದ್ದಾರೆ. ಯತ್ನಾಳ್ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಕೂಡಲೇ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮೌಲಾನಾ ಮುಹಮ್ಮದ್ ಸೈಯದ್ ಹುಸೈನಿ, ನ್ಯಾಯವಾದಿ ವಹಾಜ್ ಬಾಬಾ, ಅಬ್ದುಲ್ ರಹೀಮ್, ನಜೀರ್ ಅಹ್ಮದ್, ಅಲೀಮ್ ಇಲಾಹಿ, ನಾಸೀರ್ ಹುಸೈನ್ ಉಸ್ತಾದ್ ಸೇರಿದಂತೆ ಹಲವು ಧಾರ್ಮಿಕ ಮುಖಂಡರು, ವಿವಿಧ ಸಂಘಟನೆಗಳ ಸದಸ್ಯರು ಹಾಗೂ ಯುವಕರು ಹಾಜರಿದ್ದರು.
Next Story