ಕಲಬುರಗಿ | ಚಿತ್ತಾಪುರ ತಹಶೀಲ್ದಾರ್ ಕಚೇರಿಗೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಭೇಟಿ : ಪರೀಶಿಲನೆ

ಕಲಬುರಗಿ : ಚಿತ್ತಾಪುರ ಪಟ್ಟಣದ ತಹಶೀಲ್ದಾರ್ ಕಚೇರಿಗೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ಭೇಟಿ ನೀಡಿ ಭೂ ದಾಖಲೆಗಳ ಡಿಜಿಟಲೀಕರಣ ಕೆಲಸದ ಪ್ರಗತಿ ಪರಿಶೀಲಿಸಿದರು.
ಕರ್ನಾಟಕ ಪಬ್ಲಿಕ್ ಶಾಲೆಯ ಹೊಸ ಕಟ್ಟಡದ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು, ಕಾಮಗಾರಿಯನ್ನು ಗುಣಮಟ್ಟದಿಂದ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗಯ್ಯ ಹಿರೇಮಠ, ಗ್ರೇಡ್ 2 ತಹಶೀಲ್ದಾರ್ ರಾಜಕುಮಾರ್ ಮರತೂರಕರ್, ಲೋಕೋಪಯೋಗಿ ಇಲಾಖೆಯ ಎಇಇ ಮುಹಮ್ಮದ್ ಇಸ್ಮಾಯಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಗ್ರಾಮಾಡಳಿತಾಧಿಕಾರಿ ಮೈನೋದ್ದಿನ್, ವಿಠಲ್ ರಾವ್ ಸೇರಿದಂತೆ ಇತರರು ಇದ್ದರು.
Next Story