ಕಲಬುರಗಿ: ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ; ಶಿಕ್ಷಕ ಅಮಾನತು
ಕಲಬುರಗಿ: ಆಳಂದ ಪೋಲಿಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ದೂರಿನನ್ವಯ ಡಿಡಿಪಿಐ ಮಾರ್ಗದರ್ಶನದಲ್ಲಿ ಶಿಕ್ಷಕ ಮಲ್ಲಿಕಾರ್ಜುನ ಅವರನ್ನು ಸೇವೆಯಿಂದ ಅಮಾನತುಗೊಳಿಸಿ బిఇఒ ಸಿ.ಜೆ.ಹಳ್ಳದ ಆದೇಶಿಸಿದ್ದಾರೆ.
ಶಾಲೆಯಲ್ಲಿ ಶಿಕ್ಷಕ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿ ಮನೆಯಲ್ಲಿ ತಿಳಿಸಿದ್ದ ಹಿನ್ನೆಲೆಯಲ್ಲಿ ಪಾಲಕರು ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡು, ವಿದ್ಯಾರ್ಥಿನಿಯನ್ನು ಬೇರೆ ಶಾಲೆಗೆ ದಾಖಲಿಸಿ ಸೋಮವಾರ ಶಿಕ್ಷಕನ ವಿರುದ್ಧ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳವಾರ ಶಾಲೆಗೆ ಭೇಟಿ ನೀಡಿ ಸಮಗ್ರ ಮಾಹಿತಿ ಪಡೆದು ಪರಿಶೀಲಿಸಿ ಉಪ ನಿರ್ದೇಶಕರಿಗೆ ಸಲ್ಲಿಸಿದ ವರದಿ ಆಧರಿಸಿ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.
Next Story