ಕಲಬುರಗಿ | ಗುಲ್ಬರ್ಗಾ ವಿವಿಯಲ್ಲಿ ದಾಸೋಹ ದಿನ ಆಚರಣೆ

ಕಲಬುರಗಿ : ಇಲ್ಲಿನ ಗುಲ್ಬರ್ಗಾ ವಿಶ್ವವಿದ್ಯಾಲಯ ಜ್ಞಾನ ಗಂಗಾ ಆವರಣದಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ನಾತಕೋತ್ತರ ಬಾಲಕರ ವಸತಿ ನಿಲಯದಲ್ಲಿ ತ್ರೀವಿಧ ದಾಸೋಹಿ ಶ್ರೀ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿ ಪ್ರಯುಕ್ತ ದಾಸೋಹ ದಿನ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಸತಿ ನಿಲಯದ ಪಾಲಕರಾದ ಲಕ್ಷ್ಮೀಕಾಂತ, ವಸತಿ ನಿಲಯದ ಅಧ್ಯಕ್ಷ ರಾಚಯ್ಯ ಸ್ವಾಮಿ ಹಿರೇಮಠ, ಉಪಾಧ್ಯಕ್ಷರಾದ ಶಾಂತು, ವಸತಿ ನಿಲಯದ ಅಡುಗೆ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Next Story