Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಉದ್ಯೋಗ ಮೇಳಕ್ಕೆ ಬಸ್‌ ವ್ಯವಸ್ಥೆ; ಸಕಲ...

ಉದ್ಯೋಗ ಮೇಳಕ್ಕೆ ಬಸ್‌ ವ್ಯವಸ್ಥೆ; ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ13 April 2025 6:16 PM IST
share
ಉದ್ಯೋಗ ಮೇಳಕ್ಕೆ ಬಸ್‌ ವ್ಯವಸ್ಥೆ; ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ: ಕಲಬುರಗಿಯಲ್ಲಿ ಎಪ್ರಿಲ್ 16 ರಂದು ನಡೆಯುವ ಉದ್ಯೋಗ ಮೇಳಕ್ಕೆ ಕಲಬುರಗಿ ವಿಭಾಗದ ವಿವಿಧ ಜಿಲ್ಲೆಗಳಿಂದ ಉದ್ಯೋಗ ಆಕಾಂಕ್ಷಿಗಳು ಆಗಮಿಸಲು ಅನುಕೂಲವಾಗುವಂತೆ ಸಾರಿಗೆ ಬಸ್ ವ್ಯವಸ್ಥೆ ಮಾಡಬೇಕು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ರವಿವಾರ ಬೆಂಗಳೂರಿನಿಂದ ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿವಿಧ ಅಧಿಕಾರಿಗಳ ಸಭೆ ನಡೆಸಿದ ಅವರು, ವಿಭಾಗ ಮಟ್ಟದ ಉದ್ಯೋಗ ಮೇಳ ಇದಾಗಿರುವುದರಿಂದ 7 ಜಿಲ್ಲಾ ಕೇಂದ್ರ ಹಾಗೂ ಅಭ್ಯರ್ಥಿಗಳ ನೋಂದಣಿ ಅನುಗುಣವಾಗಿ ತಾಲೂಕು ಕೇಂದ್ರದಿಂದ ಕೂಡಾ ಬಸ್ ವ್ಯವಸ್ಥೆ ಮಾಡಿ ಮುಂಚಿತವಾಗಿ ಬಸ್ ಬಿಡುವ ಸ್ಥಳ ಮತ್ತು ಸಮಯದ ಬಗ್ಗೆ ಪ್ರಚಾರ ಮಾಡುವಂತೆ ಕೆ.ಕೆ.ಆರ್.ಟಿ.ಸಿ. ಎಂ.ಡಿ. ಎಂ.ರಾಚಪ್ಪ ಅವರಿಗೆ ಸೂಚಿಸಿದರು.

ಬೃಹತ್ ಉದ್ಯೋಗ ಮೇಳ ಮತ್ತು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭೆ‌ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರದೇಶದ ಶಾಸಕರು-ಸಂಸದರು ಹಾಗೂ ಇತರೆ‌ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಜೊತೆಗೆ ಸಾವಿರಾರು ಸಂಖ್ಯೆಯಲ್ಲಿ ಅಭ್ಯರ್ಥಿಗಳು ಆಗಮಿಸುವುದರಿಂದ ಕುಡಿಯುವ ನೀರು, ಶಾಮಿಯಾನದ ವ್ಯವಸ್ಥೆ, ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಬೇಕು. ಜನಸಂದಣಿ ನಿಯಂತ್ರಣಕ್ಕೆ ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದ ಸಚಿವರು, ಉದ್ಯೋಗ ಮೇಳ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೊಕಾರ್ಪಣೆಯ ಕಾರ್ಯಕ್ರಮಕ್ಕೆ ಪ್ರತ್ಯೇಕವಾಗಿ ಉಸ್ತುವಾರಿ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಡಿಸಿ ಬಿ.ಫೌಜಿಯಾ ತರನ್ನುಮ್ ಅವರಿಗೆ ನಿರ್ದೇಶನ ನೀಡಿದರು.





ಪುಣೆ,ಹೈದ್ರಾಬಾದ್ ಕಂಪನಿಗಳನ್ನು ಕರೆತನ್ನಿ:

ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಲಶ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, ಉದ್ಯೋಗ ಮೇಳಕ್ಕೆ ನೆರೆಯ ಪುಣೆ, ಹೈದರಾಬಾದ್ ಮಹಾನಗರದ ಕಂಪನಿಗಳು ಭಾಗವಹಿಸುವಂತೆ ಹೆಚ್ಚು ಮುತುವರ್ಜಿ ವಹಿಸಬೇಕು. ಎಫ್.ಕೆ.ಸಿ.ಸಿ.ಐ ಅವರನ್ನು ಸಂಪರ್ಕಿಸಿ ಕಂಪನಿಗಳನ್ನು ಕರೆತರುವ ಕೆಲಸ ಮಾಡಿ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ನಾಗರಾಜ್ ಅವರಿಗೆ ಸೂಚಿಸಿದರು.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ನಾಗರಾಜ್ ಮಾತನಾಡಿ, ಇದುವರೆಗೆ 30 ವಿವಿಧ ವಲಯದ 275 ಉದ್ಯೋಗದಾತ ಕಂಪನಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 157 ಕಂಪನಿಗಳು ನೇರವಾಗಿ, 80 ಎಚ್.ಆರ್. ಕನ್ಸಲಟೆಂಸಿಗಳು ಹಾಗೂ 37 ಪೇ ರೋಲ್ ಕಂಪನಿಗಳು ಸೇರಿವೆ. ಇನ್ಫೋಸಿಸ್, ವಿಪ್ರೋದಂತಹ ಐ.ಟಿ. ದೈತ್ಯ ಕಂಪನಿಗಳನ್ನು ಕರೆತರುವ ಪ್ರಯತ್ನ ನಡೆದಿದೆ. 157 ಕಂಪನಿಗಳು ನೇರವಾಗಿ, 80 ಎಚ್.ಆರ್. ಕರೆನ್ಸಿಗಳ ಹಾಗೂ 37 ಪೇ ರೋಲ್ ಕಂಪನಿಗಳು ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದು, ಇನ್ನು ಎರಡು ದಿನ ಬಾಕಿ ಇರುವ ಕಾರಣ ಐ.ಇ.ಸಿ. ಚಟುವಟಿಕೆ ತೀವ್ರಗೊಳಿಸಿ ಹೆಚ್ಚಿನ ನೋಂದಣಿ ಮಾಡಲಾಗುವುದು ಎಂದು ಸಚಿವರಿಗೆ ಮಾಹಿತಿ ನೀಡಿದರು. ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, ಸುಮಾರು 25 ಸಾವಿರ ಜನ ನೋಂದಣಿ ನಿರೀಕ್ಷೆ ಹೊಂದಿದ್ದು, ಕೂಡಲೆ ರೇಡಿಯೋ ಜಿಂಗಲ್ಸ್ ಸೇರಿದಂತೆ ಎಲ್ಲಾ ವಿಧದ ಮಾಧ್ಯಮಗಳನ್ನು ಬಳಸಿ ಹೆಚ್ಚು ಪ್ರಚಾರ ಕಾರ್ಯ ಮಾಡಬೇಕು‌ ಎಂದರು.

ಕರ್ನಾಟಕ ಕೌಲಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ್‌ ಮಾತನಾಡಿ ಈ ಬಾರಿ ಉದ್ಯೋಗ‌ ಮೇಳದಲ್ಲಿ ಆಯಾ ಕಂಪನಿಗಳ ಲೆಟರ್ ಹೆಡ್ ನಲ್ಲಿಯೇ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲು ತಿಳಿಸಲಾಗಿದೆ. ಇಂಜಿನಿಯರಿಂಗ್, ಮೆಡಿಕಲ್, ಆರ್ಕಿಟೆಕ್ಟರ್ ಸೇರಿದಂತೆ ಮೇಳದಲ್ಲಿ ಭಾಗವಹಿಸುವ ಪ್ರತಿ ಅಭ್ಯರ್ಥಿಯ ದತ್ತಾಂಶ ಸಂಗ್ರಹಿಸಲಾಗುವುದು. ಇಲ್ಲಿ ಉದ್ಯೋಗ ಸಿಗದವರಿಗೆ ಮುಂದಿನ ದಿನದಲ್ಲಿ ಅಗತ್ಯ ತರಬೇತಿ ನೀಡಿ ಪ್ಲೇಸ್ ಮೆಂಟ್ ದೊರೆಯಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ವಿಧಾನಸಭೆ ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ವಿಧಾ‌ನ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ‌ ಕಮಕನೂರ, ಜಗದೇವ ಗುತ್ತೇದಾರ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ.ಅಡ್ಡೂರು ಶ್ರೀನಿವಾಸಲು, ಡಿ.ಸಿ.ಪಿ ಕನಿಕಾ ಸಿಕ್ರಿವಾಲ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್‌ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗುಬಾಯಿ ಸೇರಿದಂತೆ‌ ಅನೇಕ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X