ಕಲಬುರಗಿ | ಲಾರಿ-ಬೈಕ್ ಢಿಕ್ಕಿ : ಸವಾರರಿಗೆ ಗಾಯ
ಕಲಬುರಗಿ : ಲಾರಿ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ, ಇಬ್ಬರು ಗಾಯಗೊಂಡಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಸುಲೇಪೆಟ್ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಬೈಕ್ ಸವಾರರಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಬೈಕ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು, ಗಾಯಳುಗಳನ್ನು ಶೀಘ್ರದಲ್ಲೇ ಡಿಸ್ಚಾರ್ಜ್ ಕೂಡ ಆಗಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಘಟನೆ ಸುಲೇಪೆಟ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಅಪಘಾತಕ್ಕೆ ಒಳಗಾದವರು ದೂರು ನೀಡಿದರೆ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸುಲೇಪೆಟ್ ಪೊಲೀಸ್ ಠಾಣೆಯ ಪಿಎಸ್ಐ ತಿಳಿಸಿದ್ದಾರೆ.
Next Story