ಕಲಬುರಗಿ | ಕಾರಿಗೆ ಲಾರಿ ಢಿಕ್ಕಿ; ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ಕಲಬುರಗಿ : ರಸ್ತೆ ದಾಟುತ್ತಿದ್ದ ಮಹಿಳೆಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರಿಗೆ ಲಾರಿ ಢಿಕ್ಕಿ ಹೊಡೆದಿರುವ ಘಟನೆ ನಗರದ ರಿಂಗ್ ರಸ್ತೆಯ ಹುಸೇನಿ ಗಾರ್ಡನ್ ಬಳಿ ಬುಧವಾರ ನಡೆದಿದೆ.
ಲಾರಿಯ ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗೊಂಡಿದ್ದು, ಸ್ಥಳೀಯರ ರಕ್ಷಣೆ ಮಾಡಿದ್ದಾರೆ, ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಕಲಬುರಗಿ ನಗರ ಸಂಚಾರಿ ಠಾಣೆ-2 ರ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
Next Story