Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಪಂಚ ಗ್ಯಾರಂಟಿ ಕಿರುಹೊತ್ತಿಗೆ...

ಕಲಬುರಗಿ | ಪಂಚ ಗ್ಯಾರಂಟಿ ಕಿರುಹೊತ್ತಿಗೆ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ7 April 2025 9:10 PM IST
share
ಕಲಬುರಗಿ | ಪಂಚ ಗ್ಯಾರಂಟಿ ಕಿರುಹೊತ್ತಿಗೆ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ರಾಜ್ಯ ಸರ್ಕಾರವು ಶಕ್ತಿ, ಅನ್ನ ಭಾಗ್ಯ, ಗೃಹ ಲಕ್ಷ್ಮಿ, ಗೃಹ ಜ್ಯೋತಿ ಹಾಗೂ ಯುವನಿಧಿ ಈ ಐದು ಗ್ಯಾರಂಟಿ ಯೋಜನೆಗಳನ್ನು ಯಶ್ವಸಿಯಾಗಿ ರಾಜ್ಯಾದ್ಯಂತ ಅನುಷ್ಠಾನಗೊಳಿಸಿದ್ದು, ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಹೊರತರಲಾದ ಜಿಲ್ಲಾ ಮಟ್ಟದಲ್ಲಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತಾಗಿ ಸಮಗ್ರ ಮಾಹಿತಿಯನ್ನು ಒಳಗೊಂಡ ಕಿರು ಹೊತ್ತಿಗೆಯನ್ನು ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್,‌ ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಡುಗಡೆ ಮಾಡಿದರು.

ಸೋಮವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ ಸಮಾರಂಭದಲ್ಲಿ "ಪಂಚ ಗ್ಯಾರಂಟಿ" ಯೋಜನೆ - ಕಲಬುರಗಿ ಜಿಲ್ಲಾ ಪ್ರಗತಿ ಕಿರಹೊತ್ತಿಗೆ ಬಿಡುಗಡೆ ಮಾಡಿ ಮಾತನಾಡಿದ ಸಚಿವರು, ಈ ಕಿರು ಪುಸ್ತಕವು ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಯಶೋಗಾಥೆ, ಅನಿಸಿಕೆ ಸೇರಿದಂತೆ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸಮಗ್ರ ಚಿತ್ರಣವನ್ನು ಕಟ್ಟಿಕೊಡುವಂತೆ ರೂಪಿಸಲಾಗಿರುವುದು ಪ್ರಶಂಸನೀಯವಾಗಿದೆ ಎಂದು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಣೆ :

ಇದೇ‌ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ 2024-25ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಅಡಿಯಲ್ಲಿ ಜಿಲ್ಲೆಯ 8 ಪರಿಶಿಷ್ಟ ಜಾತಿ ಹಾಗೂ ಓರ್ವ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಲ್ಯಾಪ್ ಟಾಪ್ ಮತ್ತು ಕ್ಯಾಮರಾ ಒಳಗೊಂಡ ಮೀಡಿಯಾ ಕಿಟ್ ಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಗಣ್ಯರು ವಿತರಿಸಿದರು.

ಗ್ರಾಮೀಣ ಭಾಗದಲ್ಲಿ ಅರಿವು ಕೇಂದ್ರ ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಅರಿವು ಕೇಂದ್ರಗಳಿಗೆ‌ ಹೊಸದಾಗಿ ನೇಮಕಗೊಂಡ 39 ಗ್ರಂಥಾಲಯ‌ ಮೇಲ್ವಿಚಾರಕರ ಪೈಕಿ‌ 35 ಜನರಿಗೆ ಇಂದಿಲ್ಲಿ ನೇಮಕಾತಿ ಪತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಆಳಂದ ಶಾಸಕ‌ ಬಿ.ಆರ್.ಪಾಟೀಲ, ಕರ್ನಾಟಕ ರೇಷ್ಮೆ‌ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ, ಶಾಸಕರಾದ ಅಲ್ಲಮಪ್ರಭು ಪಾಟೀಲ,‌ ಅವಿನಾಶ ಜಾಧವ, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ ಪಾಟೀಲ, ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ‌ ಕಮಕನೂರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ವಾರ್ತಾ ಮತ್ತು ಸಾರ್ವಜನಿಕ‌ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ, ಜಿಲ್ಲಾ ಕೇಂದ್ರ ಗ್ರಂಥಾಲಯದ‌ ಅಧಿಕಾರಿ ಪರಮೇಶ್ವರ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X