ಕಲಬುರಗಿ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸವರಾಜ ಮತ್ತಿಮಡು ಚಾಲನೆ

ಕಲಬುರಗಿ : ಜನತೆ ತಮ್ಮ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ನಂಬಿಕೆಗೆ ಧಕ್ಕೆಬಾರದ ಹಾಗೆ ನಡೆದುಕೊಳ್ಳುತ್ತಿದ್ದು, ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಲು ಪಣ ತೊಟ್ಟಿದ್ದೇವೆ. ಇದಕ್ಕಾಗಿ ಕ್ಷೇತ್ರದ ಪ್ರತಿ ಹಳ್ಳಿಗಳಿಗೂ ಮೂಲಭೂತ ಸೌಕರ್ಯ ಒದಗಿಸುವ ಗುರಿ ಹೊಂದಿದ್ದೇನೆ ಎಂದು ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.
ತಮ್ಮ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ತಮ್ಮ ಕೆಲಸ ಕಾರ್ಯಗಳನ್ನು ನೋಡಿ ಕ್ಷೇತ್ರದ ಜನತೆ ತಮಗೆ ಎರಡನೆಯ ಬಾರಿಗೆ ಆಯ್ಕೆ ಮಾಡಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದರು.
ಜನಹಿತಕ್ಕಾಗಿ ಬದುಕಿದಾಗ ಮಾನವ ಜನ್ಮ ಸಾರ್ಥಕವಾಗುತ್ತದೆ. ಜನಸೇವೆಯಲ್ಲಿಯೇ ಜನಾರ್ದನನ್ನು ಕಾಣಬೇಕು ಎಂದು ಅಬ್ಬೆ ತುಮಕೂರಿನ ವಿಶ್ವರಾಧ್ಯ ಸಿದ್ದ ಸಂಸ್ಥಾನ ಮಹಾಮಠದ ಪೀಠಾಧಿಪತಿಗಳಾದ ದಾಸೋಹ ಬ್ರಹ್ಮ ಶ್ರೀ ಷ.ಬ್ರ ಡಾ ಗಂಗಾಧರ ಶಿವಾಚಾರ್ಯ ಮಹಾಸ್ವಾಮಿಗಳು ಕರೆ ನೀಡಿದರು.
ಸಮಾರಂಭದಲ್ಲಿ ಉಪಸ್ಥಿತರಿದ್ದ ಶ್ರೀನಿವಾಸ ಸರಡಗಿ ಗ್ರಾಮದ ಶಕ್ತಿಪೀಠಾಧಿಪತಿಗಳಾದ ಪೂಜ್ಯ ಶ್ರೀ ಸದ್ದರ್ಮ ಶಿರೋಮಣಿ ಡಾ.ಅಪ್ಪಾರಾವ ದೇವಿ ಮುತ್ಯಾ ಮಹಾರಾಜರು ಮಾತನಾಡಿದರು. ಶ್ರೀನಿವಾಸ ಸರಡಗಿಯ ಹಿರೇಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ವೀರಭದ್ರ ಶಿವಾಚಾರ್ಯರು ಗೊಬ್ಬರು ವಾಡಿಯ ಶ್ರೀ ಸಂತ ಸೇವಾಲಾಲ ಪುಣ್ಯಾಶ್ರಮದ ಪೀಠಾಧಿಪತಿಗಳಾದ ಬಳಿರಾಮ ಮಹಾರಾಜರು, ವೇದಮೂರ್ತಿ ವಿರಭದ್ರಯ್ಯ ಸ್ವಾಮಿ ಚಿಕ್ಕಮಠ, ಸಮಾಜ ಸೇವಕಿ ಜಯಶ್ರೀ ಬಸವರಾಜ ಮತ್ತಿಮಡು, ಗಂಗಪ್ಪಗೌಡ ಪಾಟೀಲ, ಸಂಗಮೇಶ ವಾಲಿ, ಸಂಗಯ್ಯ ಹಿರೇಮಠ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾದ ಬಸವರಾಜ ಮತ್ತಿಮಡು ದಂಪತಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು. ವಿನೋಧ ಆರ್ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುರೇಶ ಎಸ್.ತಂಗಾ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗಲಿಂಗಯ್ಯ ಮಠಪತಿ ನಿರೂಪಿಸಿದರು. ವಿಶ್ವನಾಥ ಪಾಟೀಲ ಅಭಿನಂದನಾ ನುಡಿಗಳನ್ನು ಅಡಿದರು. ಸಮಾರಂಭದಲ್ಲಿ ಗ್ರಾಮದ ಗಣ್ಯರು ಮುಖಂಡರು ಪ್ರಮುಖರು ಭಾಗವಹಿಸಿದ್ದರು.