Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕುಡಿಯುವ ನೀರಿನ ಸಮಸ್ಯೆ...

ಕಲಬುರಗಿ | ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥಕ್ಕೆ ಶಾಸಕ ಬಿ.ಆರ್.ಪಾಟೀಲ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ5 April 2025 10:12 PM IST
share
Photo of Metting

ಕಲಬುರಗಿ : ಗ್ರಾಮೀಣಾಭಿವೃದ್ಧಿ, ಜಲ ಸಂರಕ್ಷಣೆ, ಮತ್ತು ಆರಂಭಿಕ ಸೌಲಭ್ಯಗಳ ಸುಧಾರಣೆಗೆ ಸಂಬಂಧಿಸಿದಂತೆ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರಾದ ಕ್ಷೇತ್ರದ ಶಾಸಕ, ನೀತಿ ಮತ್ತು ಯೋಜನಾ ಆಯೋಗದ ರಾಜ್ಯ ಉಪಾಧ್ಯಕ್ಷರಾದ ಬಿ.ಆರ್.ಪಾಟೀಲ್‌ ಅವರು ಅಧಿಕಾರಿಗಳಿಗೆ ವಿವಿಧ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

ಆಳಂದ ಪಟ್ಟಣದ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಟಾಸ್ಕಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ರೈತರ ಹಿತಾಸಕ್ತಿ, ಪರಿಸರ ಸಂರಕ್ಷಣೆ, ಮತ್ತು ಗ್ರಾಮೀಣ ಜನರ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡುವಂತಹ ಕೆಲಸಗಳಾಗಬೇಕು ಎಂದರು.

"ಕೆರೆಗಳಲ್ಲಿ ಹೂಳು ತುಂಬಿದ್ದರಿಂದ ಮಳೆಗಾಲದಲ್ಲಿ ನೀರು ಸಂಗ್ರಹಣೆಯ ಸಾಮರ್ಥ್ಯ ಕಡಿಮೆಯಾಗುತ್ತಿದೆ. ಹೂಳೆತ್ತಿದರೆ ಕೆರೆಗಳು ಖಾಲಿಯಾಗಿ, ಮಳೆಗಾಲದಲ್ಲಿ ಹೆಚ್ಚು ನೀರು ಸಂಗ್ರಹವಾಗುತ್ತದೆ. ಇದು ರೈತರಿಗೆ ಮತ್ತು ಗ್ರಾಮೀಣ ಭಾಗದ ಅಂತರ್ಜಲ ಮಟ್ಟ ಸುಧಾರಣೆಗೆ ಸಹಾಯಕವಾಗುತ್ತದೆ," ಎಂದು ವಿವರಿಸಿ, ಗ್ರಾಪಂನ 15ನೇ ಹಣಕಾಸು ಯೋಜನೆ ಅಥವಾ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆಗಳ ಹೂಳೆತ್ತುವ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್‌ ಪಿಡಿಓಗಳಿಗೆ ಸೂಚನೆ ನೀಡಿದರು.

ಜೆಜೆಎಂ ಕಾಮಗಾರಿಯ ಪೈಪ್ ಲೈನ್ ಅಗೆದ ಜಾಗವನ್ನು ಸರಿಪಡಿಸಿ ಗ್ರಾಮೀಣ ಭಾಗದಲ್ಲಿ ಜಲ ಜೀವನ ಮಿಷನ್ (ಜೆಜಿಎಂ) ಯೋಜನೆಯಡಿ ನೀರಿನ ಪೈಪ್ ಲೈನ್ ಕಾಮಗಾರಿಯಲ್ಲಿ ಹಾಳಾದ ರಸ್ತೆಗಳನ್ನು ದುರಸ್ಥಿಗೊಳಿಸಬೇಕು. ರಸ್ತೆ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

"ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜೆಜಿಎಂ ಯೋಜನೆಯ ಉದ್ದೇಶ ಹಳ್ಳಹಿಡಿದುಕೊಂಡಿದೆ. ಇದರ ಉದ್ದೇಶ ಈಡೇರಬೇಕಾದರೆ, ಕಾಮಗಾರಿಯಲ್ಲಿ ಯಾವುದೇ ಅಡೆತಡೆ ಇರಬಾರದು. ರಸ್ತೆಗಳಲ್ಲಿ ಪೈಪ್ ಲೈನ್ ಅಡ್ಡಿಯಾಗುವ ಜಾಗಗಳನ್ನು ತಕ್ಷಣವೇ ಸರಿಪಡಿಸಿ, ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಿ," ಎಂದು ಹೇಳಿದರು.

ನೀರಿನ ಸಮಸ್ಯೆಯಾದರೆ ಅಧಿಕಾರಿಗಳೇ ಹೊಣೆ :

ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಿರುವ ಹಿನ್ನೆಲೆಯಲ್ಲಿ, ಗ್ರಾಮ ಪಂಚಾಯತ್‌ ಪಿಡಿಓಗಳು, ತಾಲೂಕು ಮಟ್ಟದ ಅಧಿಕಾರಿಗಳು ಸಮಸ್ಯೆ ನಿವಾರಣೆಗೆ ಮುಂದಾಗಬೇಕು "ಪ್ರತಿ ಗ್ರಾಮದಲ್ಲಿ ಕುಡಿಯುವ ನೀರಿನ ಲಭ್ಯತೆ ಖಚಿತಪಡಿಸಿಕೊಳ್ಳಿ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿದ್ದರೆ, ಅಧಿಕಾರಿಗಳೇ ಹೊಣೆಯಾಗುತ್ತಾರೆ ಮತ್ತು ಅವರ ವಿರುದ್ಧ ಕ್ರಮಜರುಗಿಸಲಾಗುವುದು. "ಜನರ ಮೂಲಭೂತ ಅವಶ್ಯಕತೆಗಳನ್ನು ಈಡೇರಿಸುವಲ್ಲಿ ಯಾವುದೇ ರಾಜಿ ಇರಬಾರದು," ಎಂದು ಶಾಸಕರು ತಾಕೀತು ಮಾಡಿದರು.

ಸಭೆಯಲ್ಲಿ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ್, ಪುರಸಭೆ ಮುಖ್ಯ ಅಧಿಕಾರಿ ಸಂಗಮೇಶ್ ಪನಶೆಟ್ಟಿ ಸೇರಿದಂತೆ ಇತರ ಅಧಿಕಾರಿಗಳು ಸಭೆಗೆ ಮಾಹಿತಿ ಒದಗಿಸಿದರು. ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹೃಷಿಕೇಶ ದಂತಕಾಳೆ, ಜೆಸ್ಕಾಂ ಅಧಿಕಾರಿ ಪ್ರಭು ಮಡ್ಡಿತೋಟ್, ಸಹಾಯಕ ಕೃಷಿ ನಿರ್ದೇಶಕ ಶರಣಗೌಡ ಪಾಟೀಲ, ಪಿಡಬ್ಲೂಡಿ ಎಇಇ ಆನಂದ, ಸಿಡಿಪಿಒ ಶ್ರೀಕಾಂತ ಮೇಂಗಜಿ, ಪಿಡಿಒ ರಾಮದಾಸ ಪೂಜಾರಿ, ಮಂಜೂರ ಪಟೇಲ್, ಧರ್ಮಣ್ಣಾ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X