ಕಲಬುರಗಿ | ದ್ವಿತೀಯ ಪಿಯುಸಿ ಫಲಿತಾಂಶ : ಎಂಪಿಎಂಜಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ

ಕಲಬುರಗಿ : ಆಳಂದ ಪಟ್ಟಣದ ಪ್ರತಿಷ್ಠಿತ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಮಾತೋಶ್ರೀ ಪ್ರೇಮಿಳಾಬಾಯಿ ಮಾಧವರಾವ್ ಗುತ್ತೇದಾರ ಸ್ವತಂತ್ರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಲಭ್ಯವಾಗಿದೆ.
ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಅಂಕಿತಾ ರಾಮಕುಮಾರ ಶೇ. 91, ಕಾಜಲ ಬಸವರಾಜ ಶೇ. 86.16, ಸಿದ್ದಮ್ಮಾ ಅಂಬಾರಾಯ ಶೇ. 85.16, ಕಲಾ ವಿಭಾಗದ ತುಳಸಾಬಾಯಿ ಸುಧಾಕರ ಶೇ. 93, ಅಂಬಿಕಾ ಲಕ್ಷ್ಮಣ ಶೇ. 90%, ಅಂಬಿಕಾ ಅಶೋಕ ಶೇ. 87.33, ಭಾಗ್ಯವಂತಿ ಬಸವರಾಜ ಶೇ. 85, ವಿಜ್ಞಾನ ವಿಭಾಗದ ಸಿದ್ದಮ್ಮಾ ಗುರುನಾಥ ಶೇ. 88 ಅಂಕಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ಒಟ್ಟಾರೆ ಫಲಿತಾಂಶವು ತೃಪ್ತಿದಾಯಕವಾಗಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿನಿ ಅಂಕಿತಾ ರಾಮಕುಮಾರ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ದ್ವೀತಿಯ ಸ್ಥಾನ ಪಡೆದಿದ್ದಾಳೆ. ಕಾಲೇಜು ಸತತ 15 ವರ್ಷಗಳಿಂದ ಉತ್ತಮ ಫಲಿತಾಂಶ ನೀಡುತ್ತಿದೆ. ಮಾನವಿಕ ವಿಷಯಗಳನ್ನು ಕಲಿಸುವುದರ ಜೊತೆಗೆ ವ್ಯವಹಾರ ಸಂಬಂಧಿ ವಿಷಯಗಳಲ್ಲಿ ಜ್ಞಾನ ನೀಡಲಾಗುತ್ತಿದೆ. ವಿಜ್ಞಾನ ವಿಭಾಗದಲ್ಲಿ ಪಠ್ಯಕ್ರಮದ ಜೊತೆಗೆ ನೀಟ್, ಸಿಇಟಿ, ಜೆಇಇ ಸೇರಿದಂತೆ ಮುಂತಾದ ಪರೀಕ್ಷೆಗಳಿಗೆ ಆರಂಭದಿಂದಲೇ ತರಬೇತಿ ನೀಡಲಾಗುತ್ತಿದೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರೂ ಹಾಗೂ ಮಾಜಿ ಶಾಸಕರಾದ ಸುಭಾಷ್ ಆರ್ ಗುತ್ತೇದಾರ, ಸಂಸ್ಥೆಯ ಕಾರ್ಯದರ್ಶಿಗಳೂ ಹಾಗೂ ಜಿ.ಪಂ ಮಾಜಿ ಉಪಾಧ್ಯಕ್ಷರಾದ ಹರ್ಷಾನಂದ ಗುತ್ತೇದಾರ, ಪ್ರಾಚಾರ್ಯ ಮಲ್ಲಿಕಾರ್ಜುನ ಬುಕ್ಕೆ ಸೇರಿದಂತೆ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.