Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಫೆ.24 ರಿಂದ ರಾಷ್ಟ್ರಮಟ್ಟದ...

ಕಲಬುರಗಿ | ಫೆ.24 ರಿಂದ ರಾಷ್ಟ್ರಮಟ್ಟದ ಬೃಹತ್ ಸರಸ್ ಮೇಳ : ಸಚಿವ ಶರಣಪ್ರಕಾಶ್‌ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ21 Feb 2025 7:31 PM IST
share
Photo of Press meet

ಕಲಬುರಗಿ : ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಫೆ.24 ರಿಂದ ಮಾ.5 ರವರೆಗೆ ನಗರದ ಶ್ರೀ ಶರಣಬಸವೇಶ್ವರ ಜಾತ್ರೆ ಮೈದಾನದಲ್ಲಿ ರಾಷ್ಟ್ರಮಟ್ಟದ ನಮ್ಮ ಸರಸ್ ಮೇಳ-2025 ಆಯೋಜನೆಗೊಂಡಿದ್ದು, ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 10ದಿನಗಳ ಕಾಲ ನಡೆಯಲಿರುವ ಸರಸ್ ಮೇಳ ಕರ್ನಾಟಕ ಸರ್ಕಾರ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.

ಫೆ.24 ರಂದು ರಾಷ್ಟ್ರ ಮಟ್ಟದ ಸರಸ್ ಮೇಳವನ್ನು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ ಹಾಗೂ ಮಾಹಿತಿ & ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ಆರ್.ಪಾಟೀಲ್ ಅವರು ಉದ್ಘಾಟಿಸಲಿದ್ದಾರೆ. ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಅವರು ಅಧ್ಯಕ್ಷತೆ ವಹಿಸಲಿರುವ ಈ ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೆಯ ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರು ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ಗಣ್ಯ ಮಾನ್ಯರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಇಲಾಖಾವಾರು ಅಧಿಕಾರಿಗಳು ಹಾಗೂ ಜಿಲ್ಲೆಯ ಹಾಗೂ ಸುತ್ತಮುತ್ತಲಿನ 2000 ಕ್ಕೂ ಹೆಚ್ಚು ಸ್ವ-ಸಹಾಯ ಗುಂಪುಗಳ ಮಹಿಳೆಯರು, ಯುವ ಜನತೆ ಹಾಗೂ ಇನ್ನಿತರರು ಆಗಮಿಸಲಿದ್ದಾರೆ.

ಮೇಳದಿಂದ ಕಲಬುರಗಿಯಲ್ಲಿ ಹಬ್ಬದ ವಾತಾವರಣ ಸೃಷ್ಟಿಸಲಿದ್ದು, ಪ್ರತಿದಿನ ಬೆಳಗ್ಗೆ 10:30 ರಿಂದ ರಾತ್ರಿ 09:30 ರ ವರೆಗೆ ರಾಷ್ಟ್ರಮಟ್ಟದ ಸರಸ್ ಮೇಳ ನಡೆಯಲಿದ್ದು, ಮೇಳದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸ್ವ- ಸಹಾಯ ಗುಂಪುಗಳ ಮಹಿಳೆಯರು ಭಾಗವಹಿಸಲಿದ್ದು, ಆಯಾ ರಾಜ್ಯಗಳ ಪ್ರಮುಖ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಬೃಹತ್ ಮಟ್ಟದಲ್ಲಿ 230 ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ, 20 ಲೈವ್ ಫುಡ್ ಸ್ಟಾಲ್ :

ರಾಷ್ಟ್ರ ಮಟ್ಟದ ನಮ್ಮ ಸರಸ್ ಮೇಳದಲ್ಲಿ ಸ್ವ-ಸಹಾಯ ಗುಂಪುಗಳ ಮಹಿಳೆಯರು ಉತ್ಪಾದಿಸಿರುವ ವಿವಿಧ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕಾಗಿ ಒಟ್ಟು 230 ಮಳಿಗೆಗಳನ್ನು ಹಾಗೂ 20 ಲೈವ್ ಫುಡ್ ಸ್ಟಾಲ್ ಗಳನ್ನು ಸ್ಥಾಪಿಸಲಾಗುತ್ತಿದೆ. ಈ ಲೈವ್ ಫುಡ್ ಕೋರ್ಟ್ ನಲ್ಲಿ ರಾಜ್ಯದ 10 ಮಳಿಗೆಗಳು ಹಾಗೂ ಬೇರೆ ರಾಜ್ಯಗಳ 10 ಲೈವ್ ಫುಡ್ ಸ್ಟಾಲ್ ಗಳಲ್ಲಿ ಸ್ಥಳದಲ್ಲೇ ವಿವಿಧ ತಿಂಡಿ ಹಾಗೂ ಭಕ್ಷ್ಯಗಳನ್ನು ತಯಾರಿಸಿ ಕೊಡಲಾಗುವುದು. ಅಕ್ಕ ಕಥೆ ಶೀರ್ಷಿಕೆ ಅಡಿಯಲ್ಲಿ ಸ್ಥಾಪಿಸಲಾಗುತ್ತಿರುವ ಲೈವ್ ಫುಡ್ ಕೋರ್ಟ್ ನಲ್ಲಿ ರುಚಿ ಹಾಗೂ ಶುಚಿಯಾದ ಆಹಾರ ಪದಾರ್ಥಗಳು ಕೈಗೆಟುಕುವ ಬೆಲೆಯಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದ್ದು, ಪ್ರಮುಖವಾಗಿ ದಾವಣಗೆರೆ ಬೆಣ್ಣೆ ದೋಸೆ. ಮೈಸೂರು ಮಸಾಲ ದೊಸೆ, ಗಿರಮಿಟ್, ಬಜ್ಜಿ ಸೇರಿದಂತೆ ವಿವಿಧ ವೈವಿಧ್ಯಮಯ ಖಾದ್ಯಗಳು ದೊರೆಯಲಿವೆ.

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆ :

ನಮ್ಮ ಸರಸ್ ಮೇಳದಲ್ಲಿ 10 ದಿನಗಳ ಕಾಲ ರಾಜ್ಯದ ಖ್ಯಾತ ಸಂಗೀತಗಾರರು ಹಾಗೂ ಸ್ಥಳೀಯ ಕಲಾವಿದರಿಂದ ವಿವಿಧ ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಜೆ 6:30 ರಿಂದ ರಾತ್ರಿ 9:30 ರ ವರೆಗೆ ಆಯೋಜಿಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಾವಿದರು ಸೇರಿದಂತೆ ಸ್ಥಳೀಯ ಕಲಾವಿದರು ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ನೀಡಲಿದ್ದಾರೆ.

ನಮ್ಮ ಸರಸ್ ಮೇಳದ ವೈವಿಧ್ಯಮಯ ಉತ್ಪನ್ನಗಳು :

ಕರ್ನಾಟಕದ ಇಳಕಲ್ ಸೀರೆ, ಕಸೂತಿ ವಸ್ತುಗಳು, ಚನ್ನಪಟ್ಟಣ ಗೊಂಬೆ, ಬೀದರ್‌ ಜಿಲ್ಲೆಯ ಬಿದರಿ ಅಲಂಕಾರಿಕ ಉತ್ಪನ್ನಗಳು, ಕೊಪ್ಪಳ ಜಿಲ್ಲೆಯ ಕಿನ್ನಾಳ ಮಕ್ಕಳ ಆಟದ ಗೊಂಬೆಗಳು, ಉತ್ತರ ಭಾರತದಿಂದ ಜಮ್ಮು ಕಾಶ್ಮೀರದ ಕಸೂತಿ ಉಡುಪುಗಳು, ಪಂಜಾಬ್ ಬಳೆಗಳು, ಸಿಕ್ಕಿಂ ಮತ್ತು ಬಿಹಾರದ ಕೈಮಗ್ರ, ದಕ್ಷಿಣ ಭಾರತದ ತಮಿಳುನಾಡಿನ ಕೃತಕ ಆಭರಣಗಳು, ಕೇರಳದ ಮಣಿಗಳು, ಆಂದ್ರ ಪ್ರದೇಶದ ಆಟಿಕೆಗಳು ಸೇರಿದಂತೆ ಮುಂತಾದ ವಿವಿಧ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಪ್ರಮುಖ ಆಕರ್ಷಣೆಯಾಗಿದೆ.

ತರಬೇತಿ ಕಾರ್ಯಾಗಾರ :

ನಮ್ಮ ಸರಸ್ ಮೇಳದ ಮುಖ್ಯ ವೇದಿಕೆಯ ಪ್ರಾಂಗಣದದಲ್ಲಿ ಪ್ರತಿದಿನ ವಿವಿಧ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಪುಮುಖವಾಗಿ ಮಹಿಳೆಯರ ಉತ್ಪನ್ನಗಳಿಗೆ ಪ್ಯಾಕಿಂಗ್ ಹಾಗೂ ಬ್ಯಾಂಡಿಂಗ್, ಮಾರುಕಟ್ಟೆ ಕೌಶಲ್ಯ, ಉತ್ಪನ್ನಗಳ ಮೌಲ್ಯವರ್ಧನೆ, ಸರ್ಕಾರದ ವಿವಿಧ ಇಲಾಖೆಯಿಂದ ಸಿಗುವ ಸೌಲಭ್ಯಗಳು, ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಸಾಮಾಜಿಕ ವಿಮಾ ಭದ್ರತಾ ಸೌಲಭ್ಯ ಸೇರಿದಂತೆ ಅವರ ಉದ್ಯಮವನ್ನು ಮೇಲ್ದರ್ಜೆಗೆ ಏರಿಸಲು ಬ್ಯಾಂಕ್ ಲಿಂಕೇಜ್ ಸೇವೆಗಳ ಕುರಿತು ಉಪನ್ಯಾಸ ಹಾಗೂ ತರಬೇತಿ ಕಾರ್ಯಾಗಾರ ಆಯೋಜಿಸಲಾಗುತ್ತಿದೆ.

ವಿಶೇಷವಾಗಿ ಕಲಬುರಗಿ ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿರುವ ರಾಷ್ಟ್ರ ಮಟ್ಟದ ಈ ಸರಸ್ ಮೇಳದಲ್ಲಿ ದೇಶದ ವಿವಿಧ ರಾಜ್ಯಗಳ ಸಂಸ್ಕೃತಿ, ಪರಂಪರೆ ಮತ್ತು ವೈವಿಧ್ಯಮಯ ಕರಕುಶಲ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು, ಕಲಬುರಗಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ನಮ್ಮ ಸರಸ್ ಮೇಳವನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X