ಕಲಬುರಗಿ | ಕೊಡಲಹಂಗರ್ಗಾ ಗ್ರಾ.ಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸಕ್ಕೆ ತಡೆ : ಬಿಜೆಪಿಯಿಂದ ಸಂಭ್ರಮಾಚರಣೆ
ಕಲಬುರಗಿ : ಆಳಂದ ತಾಲ್ಲೂಕಿನ ಕೊಡಲಹಂಗರ್ಗಾ ಗ್ರಾ.ಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸಹಾಯಕ ಆಯುಕ್ತರು ಶುಕ್ರವಾರ ಕರೆದಿದ್ದ ಚುನಾವಣಾ ಪ್ರಕ್ರಿಯೆಗೆ ಕಲಬುರಗಿಯ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದ್ದಕ್ಕಾಗಿ ತಾಲ್ಲೂಕು ಬಿಜೆಪಿ ಮುಖಂಡರು ಸಂಭ್ರಮಾಚರಣೆ ನಡೆಸಿದರು.
ಕೊಡಲಹಂಗರ್ಗಾ ಗ್ರಾಮ ಪಂಚಾಯತ್ ಕೆಲ ಸದಸ್ಯರು ಗ್ರಾಮ ಪಂಚಾಯತ್ ಅಧ್ಯಕ್ಷ ಶಿವರಾಯ ಹಣಮಂತ ನಡಗೇರಿ ವಿರುದ್ಧ ಆರೋಪ ಮಾಡಿ ಅವಿಶ್ವಾಸ ವ್ಯಕ್ತಪಡಿಸಿ ಸಹಾಯಕ ಆಯುಕ್ತರ ಮೊರೆ ಹೋಗಿದ್ದರು. ಇದನ್ನು ಪ್ರಶ್ನಿಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವರಾಯ ಹಣಮಂತ ನಡಗೇರಿ ಕೋರ್ಟ್ ಮೆಟ್ಟಿಲೇರಿದಾಗ ಹೈಕೋರ್ಟ್ ಪೀಠ ಅವರ ಅಭಿಪ್ರಾಯ ಎತ್ತಿ ಹಿಡಿದು, ವಿರೋಧ ವ್ಯಕ್ತಪಡಿಸಿದ ಸದಸ್ಯರಿಗೆ ನೋಟಿಸ್ ಜಾರಿ ಮಾಡಿ ಮುಂದಿನ ವಿಚಾರಣೆವರೆಗೆ ಚುನಾವಣೆ ಪ್ರಕ್ರಿಯೆ ನಡೆಸದಂತೆ ತಡೆಯಾಜ್ಞೆ ನೀಡಿದೆ.
ಈ ತಡೆಯಾಜ್ಞೆ ಹಿನ್ನೆಲೆಯಲ್ಲಿ ಬಿಜೆಪಿಯ ಮಾಜಿ ಶಾಸಕ ಸುಭಾಷ ಗುತ್ತೇದಾರ ಸಮ್ಮುಖದಲ್ಲಿ ಬಿಜೆಪಿ ತಾಲ್ಲೂಕು ಮತ್ತು ಜಿಲ್ಲಾ ಮುಖಂಡರು ಸಂಭ್ರಮಾಚರಣೆ ನಡೆಸಿದರು.
Next Story