ಕಲಬುರಗಿ | ನಾಳೆ ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಒಂದು ದಿನದ ಕಾರ್ಯಾಗಾರ
ಕಲಬುರಗಿ : ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಸ್.ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಸ್ಟೋಡಾಂಟಿಕ್ಸ್ ಮತ್ತು ಇಂಪ್ಲಾಂಟಾಲಜಿ ವಿಭಾಗದ ವತಿಯಿಂದ ನಾಳೆ (ಶುಕ್ರವಾರ) 'ಮುಂದುವರಿದ ದಂತ ಶಿಕ್ಷಣ' ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಗಾರದ ಉದ್ಘಾಟನೆಯನ್ನು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ ನೆರವೇರಿಸಲಿದ್ದಾರೆ.
ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭಿ.ಭೀಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ.ಕೈಲಾಸ ಪಾಟೀಲ್ ಹಾಗೂ ಕಾಲೇಜಿನ ಸಂಚಾಲಕರು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಡಾ.ಅನಿಲಕುಮಾರ ಪಟ್ಟಣ, ಡಾ ಕಿರಣ್ ದೇಶಮುಖ್, ನಿಶಾಂತ್ ಎಲಿ, ಪ್ರಾಚಾರ್ಯರಾದ ಡಾ.ಜಯಶ್ರೀ ಮುದ್ದಾ, ಉಪ ಪ್ರಾಚಾರ್ಯರಾದ ಡಾ.ವಿರೇಂದ್ರ ಪಾಟೀಲ್ ಅವರು ಸಮಾರಂಭದ ವೇದಿಕೆಯ ಮೇಲೆ ಉಪಸ್ಥಿತರಿಲಿದ್ದಾರೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಧ್ಯಮ ಸಂಯೋಜಕ ಐ.ಕೆ.ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.