ಕಲಬುರಗಿ | ಎ.20 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ : ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ 11ಕೆ.ವಿ. ಸಂಗಮೇಶ್ವರ ಕಲೋನಿ ಫೀಡರ್ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಎ.20ರಂದು ರವಿವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ.
ಸಂಗಮೇಶ್ವರ ಕಾಲೋನಿ ಫೀಡರ್ :
ಉಮರ ಕಾಲೋನಿ, ಅಬುಬಕರ್ ಕಾಲೋನಿ, ಆಜಾದಪೂರ ರಸ್ತೆ, ಅಹ್ಮದ್ ನಗರ್, ಮಕ್ಕಾ ಕಾಲೋನಿ, ಮಹಾರಾಜಾ ಹೋಟೆಲ್, ವಾಟರ್ ಟ್ಯಾಂಕ್, ಯದ್ದುಲ್ಲಾ ಕಾಲೋನಿ, ಕಮಾಲ ಎ ಮುಜರತ್, ಮಹಬೂಬ ನಗರ, ವೀರಭದ್ರೇಶ್ವರ ದೇವಾಲಯ, ಖಾನ್ ಕಂಪೌಂಡ್, ಟಿಪ್ಪುಸುಲ್ತಾನ ಚೌಕ, ಸನಾ ಹೋಟೆಲ್, ಅಕಬರ್ ಭಾಗ್, ಆರ್ ಆರ್ ಲೇಔಟ್, ಸನಾ ಲೇಔಟ್, ರಾಂಜೀ ನಗರ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
Next Story