ಕಲಬುರಗಿ | ಗೋದುತಾಯಿ ಕಾಲೇಜಿನ ವಿದ್ಯಾರ್ಥಿನಿಗೆ ರ‍್ಯಾಂಕ್
ಕಲಬುರಗಿ : ವಿಜಯಪೂರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ನಡೆಸಿದ 2023-24 ನೇ ಸಾಲಿನ ಅಂತಿಮ ವರ್ಷದ ಪರೀಕ್ಷೆಯಲ್ಲಿ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದ ಕಲಾ ವಿಭಾಗ ವಿದ್ಯಾರ್ಥಿನಿ ವಿದ್ಯಾಶ್ರೀ ರಾಜಶೇಖರ ಅವರು ವಿಶ್ವವಿದ್ಯಾಲಯಕ್ಕೆ 2ನೇ ರ‍್ಯಾಂಕ್ ಪಡೆದಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪ, ಚೇರಪರ್ಸನ್ ಪೂಜ್ಯ ಡಾ.ದಾಕ್ಷಾಯಣಿ ಎಸ್.ಅಪ್ಪ ಮತ್ತು ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಶ್ಲಾಘಿಸಿ ಹಾರೈಸಿದ್ದಾರೆ.
ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಪುಟ್ಟಮಣಿ ದೇವಿದಾಸ ಮತ್ತು ಮಹಾವಿದ್ಯಾಲಯದ ಶಿಕ್ಷಕರು ಮತ್ತು ಶಿಕ್ಷಕೇತರರು ಸಂತಸ ವ್ಯಕ್ತಪಡಿಸಿದ್ದಾರೆ.
Next Story