ಕಲಬುರಗಿ | ಬಾಲಕಿಯ ಅತ್ಯಾಚಾರ : ಆರೋಪಿ ಬಂಧನ
ಬಂಧಿತ ಆರೋಪಿ ಶಿವಕುಮಾರ್ ಮಹಾನಂದಪ್ಪ ಹಡಪದ
ಕಲಬುರಗಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸೆಗಿದ ವ್ಯಕ್ತಿಯೊಬ್ಬನ್ನು ಬಂಧಿಸುವಲ್ಲಿ ಚಿಂಚೋಳಿ ತಾಲ್ಲೂಕಿನ ಸುಲೇಪೇಟ್ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಚಿಂಚೋಳಿ ತಾಲ್ಲೂಕಿನ ಸುಲೇಪೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಿಡಗುಂದ ಗ್ರಾಮದ ಶಿವಕುಮಾರ್ ಮಹಾನಂದಪ್ಪ ಹಡಪದ (40) ಬಂಧಿತ ಆರೋಪಿ.
ಆರೋಪಿ ಶಿವಕುಮಾರ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಕಟ್ಟಿಂಗ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದು, ಅದೇ ಕಟ್ಟಿಂಗ್ ಶಾಪ್ನಲ್ಲಿ ಡಿ.1ರಂದು 15 ವರ್ಷದ ಬಾಲಕಿಯನ್ನು ಪುಸಲಾಯಿಸಿ, ಅತ್ಯಾಚಾರ ಎಸಗಿ ಬಳಿಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೋಷಕರ ಹೇಳಿಕೆಯಿಂದ ಪ್ರಕರಣದ ದಾಖಲಿಸಿಕೊಂಡ ಪೊಲೀಸ,ರು ಆರೋಪಿಯನ್ನು ಸೋಮವಾರ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಕುರಿತಾಗಿ ಸುಲೇಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story