ಕಲಬುರಗಿ | ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ನೂತನ ಪದಾಧಿಕಾರಿಗಳ ಆಯ್ಕೆ
ಕಲಬುರಗಿ : ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕಲಬುರಗಿ ಜಿಲ್ಲಾ ಸಮಿತಿಯ 2025-2027 ರ ಅವಧಿಗೆ ಚುನಾವಣೆ ನಡೆಸಿ, ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಪಾರ್ಟಿಯ ನೂತನ ಜಿಲ್ಲಾಧ್ಯಕ್ಷರಾಗಿ ಸಲೀಂ ಅಹ್ಮದ್ ಚಿತ್ತಾಪುರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅಡ್ವಕೇಟ್ ಅಬ್ದುಲ್ ಖದೀರ್, ಉಪಾಧ್ಯಕ್ಷರನ್ನಾಗಿ ಸಿದ್ಧನ ಚಕ್ರ ಹಾಗೂ ಬಾಬಾ ಹುಂಡೇಕರ್ ಅವರನ್ನು ನೇಮಕ ಮಾಡಲಾಯಿತು.
ರಾಜ್ಯ ಉಪಾಧ್ಯಕ್ಷ ಮುಜಾಹಿದ್ ಪಾಷಾ ಖುರೇಷಿ ಅವರ ಉಪಸ್ಥಿತಿಯಲ್ಲಿ ಚುನಾವಣೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ರಿಜ್ವಾನ್ ಹುಮನಾಬಾದ್, ಮುಬೀನ್ ಅಹ್ಮದ್ ಸೇರಿದಂತೆ ಜಿಲ್ಲೆಯ ಇತರ ಮುಖಂಡರು ಉಪಸ್ಥಿತರಿದ್ದರು.
Next Story