ಕಲಬುರಗಿ | ಸರಣಿ ಅಪಘಾತ; ನಾಲ್ವರಿಗೆ ಗಾಯ
ಕಲಬುರಗಿ : ಕೆಕೆಆರ್ಟಿಸಿ ಬಸ್, ಮಿನಿ ಲಾರಿ ಮತ್ತು ಕಾರು ಮಧ್ಯೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಕಲಬುರಗಿ ನಗರ ಹೊರವಲಯದ ಕಪನೂರು ಕೈಗಾರಿಕಾ ಪ್ರದೇಶದ ರಸ್ತೆಯಲ್ಲಿ ಬುಧವಾರ ಸಂಜೆ 6 ಗಂಟೆಗೆ ನಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲಬುರಗಿಯಿಂದ ಹುಮನಬಾದ್ ಕಡೆ ಹೊರಟಿದ್ದ ಕೆಕೆಆರ್ಟಿಸಿ ಬಸ್ ಮತ್ತು ಕಾರು ಹಾಗೂ ಬೀದರ್ನಿಂದ ಕಲಬುರಗಿ ಕಡೆಗೆ ಬರುತ್ತಿದ್ದ ಮಿನಿ ಲಾರಿ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಈ ಕುರಿತು ಸಂಚಾರಿ ಠಾಣೆ-2 ರಲ್ಲಿ ಪ್ರಕರಣ ದಾಖಲಾಗಿದೆ.
Next Story