ಕಲಬುರಗಿ | ಎಸೆಸೆಲ್ಸಿ ಪರೀಕ್ಷೆ: ವೆಬ್‌ಕಾಸ್ಟಿಂಗ್ ವ್ಯವಸ್ಥೆ ವೀಕ್ಷಿಸಿದ ಜಿಲ್ಲಾಧಿಕಾರಿ

ಕಲಬುರಗಿ : ಕಳೆದ ಮಾ.21 ರಿಂದ ಎಸೆಸೆಲ್ಸಿ ಪರೀಕ್ಷೆ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ರವಿವಾವಾರ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಇಲ್ಲಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ವೆಬ್ ಕಾಸ್ಟಿಂಗ್ ವ್ಯವಸ್ಥೆ ವೀಕ್ಷಿಸಿದರು.
ವೆಬ್ ಕಾಸ್ಟಿಂಗ್ ಮೂಲಕ ಪ್ರತಿ ಕೇಂದ್ರದ ಮೇಲೆ ತೀವ್ರ ನಿಗಾ ವಹಿಸಬೇಕು. ಎಲ್ಲಿಯೇ ನಕಲು ಕಂಡುಬಂದಲ್ಲಿ ಕೂಡಲೆ ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ನೀಡಬೇಕು ಎಂದು ವೀಕ್ಷಣಾ ತಂಡದ ಸಿಬ್ಬಂದಿಗಳಿಗೆ ಡಿ.ಸಿ. ಸೂಚಿಸಿದರು.
ಇದೇ ಪ್ರಥಮ ಬಾರಿಗೆ ನಕಲು ಮುಕ್ತ ಎಸೆಸೆಲ್ಸಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಮೂಲಕ ಜಿಲ್ಲಾ ಕೇಂದ್ರದಿಂದಲೆ 131 ಪರೀಕ್ಷಾ ಕೇಂದ್ರದ ಮೇಲೆ ನಿಗಾ ಸಾಧಿಸಲಾಗಿದೆ. ಇದಕ್ಕಾಗಿ ತಾಂತ್ರಿಕ ಸಿಬ್ಬಂದಿಗಳನ್ನೊಳಗೊಂಡ 28 ತಂಡಗಳನ್ನು ರಚಿಸಿ ಪರೀಕ್ಷಾ ಕೇಂದ್ರ ಹಂಚಿಕೆ ಮಾಡಲಾಗಿದೆ.
ಈ ವೇಳೆ ಡಿ.ಡಿ.ಪಿ.ಐ ಸೂರ್ಯಕಾಂತ ಮದಾನೆ ಸೇರಿದಂತೆ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು
Next Story