ಕಲಬುರಗಿ | ಸಚ್ಚಿದಾನಂದ ಪ್ರೌಢ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಕಲಬುರಗಿ : ರಾವೂರಿನ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ಸಚ್ಚಿದಾನಂದ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ 10ನೇ ತರಗತಿಯ ಶರಣು ಮತ್ತು 9ನೇ ತರಗತಿಯ ಉಲ್ಲಾಸ್ ಅವರು ʼರಾಷ್ಟ್ರೀಯ ಮತದಾರ ದಿನʼದ ಅಂಗವಾಗಿ ಕಲಬುರಗಿಯ ಸರಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಕಾರ್ಯದರ್ಶಿ ಡಾ.ಗುಂಡಣ್ಣ ಬಾಳಿ, ಮುಖ್ಯಗುರು ವಿದ್ಯಾಧರ ಖಂಡಾಳ, ಶಿಕ್ಷಕ ಸಿದ್ದಲಿಂಗ ಬಾಳಿ ಸೇರಿದಂತೆ ಸಂಸ್ಥೆಯ ಸದಸ್ಯರು ಮತ್ತು ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
Next Story