ಕಲಬುರಗಿ | ನವಜಾತ ಶಿಶುವನ್ನು ಅಪಹರಿಸಿದ ಇಬ್ಬರು ಮಹಿಳೆಯರು
ಸಾಂದರ್ಭಿಕ ಚಿತ್ರ
ಕಲಬುರಗಿ : ಇಲ್ಲಿನ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಆಸ್ಪತ್ರೆಯ ಆವರಣದ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ನರ್ಸ್ ವೇಷದಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಿದ ಘಟನೆ ಸೋಮವಾರ ನಡೆದಿರುವುದು ವರದಿಯಾಗಿದೆ.
ಚಿಂಚೋಳಿ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಮಗು ಎಂದು ಗುರುತಿಸಲಾಗಿದೆ. ಈ ಮಗು ಸೋಮವಾರ ಬೆಳಿಗ್ಗೆ 4 ಗಂಟೆಗೆ ಜನಿಸಿತ್ತು ಎನ್ನಲಾಗಿದೆ.
ಇಬ್ಬರು ಮಹಿಳೆಯರು ಶೂಶ್ರುಕಿ ವೇಷದಲ್ಲಿ ಆಸ್ಪತ್ರೆಯ ವಾರ್ಡಿಗೆ ಧಾವಿಸಿದ್ದು, ಮಗುವಿಗೆ ಇಂಜೆಕ್ಷನ್ ಮಾಡಿಸಬೇಕಿದೆ ಎಂದು ನೆಪ ಹೇಳಿಕೊಂಡು ಮಗುವನ್ನು ಆಸ್ಪತ್ರೆಯಿಂದ ಹೊರಗಡೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಅವರು ವಾಪಸಾಗದೆ ಮಗುವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆಂದು ಮೂಲಗಳು ತಿಳಿಸಿವೆ.
ಈ ಕುರಿತಾಗಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.
Next Story