ಕಲಬುರಗಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಕೆರೆಪ್ಪ ಪೂಜಾರಿ
ಕಲಬುರಗಿ : ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಸೊನ್ನ ಗ್ರಾಮದ ನಿವಾಸಿ ಕೆರೆಪ್ಪ ಪೂಜಾರಿ ಮೀಣಜಗಿ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ನೆಲೋಗಿ ಪೊಲೀಸ್ ಠಾಣೆಯ ಪೊಲೀಸರು ಮತ್ತು ವೈದ್ಯರು ಆಗಮಿಸಿ ಪಂಚನಾಮ ಮಾಡಿದ್ದಾರೆ. ಬಳಿಕ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಗ್ರಾಮದ ಪ್ರಮುಖರಾದ ಬಸವರಾಜ ಸಲಗಾರ, ನಾಗಣ್ಣಗೌಡ ಮಾಲಿಪಾಟೀಲ್, ಹೊನ್ನಪ್ಪ ತಳವಾರ, ಲಕ್ಷ್ಮಣ ಗುಬ್ಯಾಡ ಸೇರಿದಂತೆ ಹಲವರು ಮೃತ ರೈತನ ಕುಟುಂಬಕ್ಕೆ ಪರಿಹಾರ ಘೋಷಿಸಬೇಕೆಂದು ಆಗ್ರಹಿಸಿದ್ದಾರೆ.
ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story