Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅಮಿತ್ ಶಾ ಹೇಳಿಕೆ ಖಂಡಿಸಿ...

ಕಲಬುರಗಿ | ಅಮಿತ್ ಶಾ ಹೇಳಿಕೆ ಖಂಡಿಸಿ ಕಾಳಗಿ ಬಂದ್ ಗೆ ವಿವಿಧ ಸಂಘಟನೆಗಳ ಬೆಂಬಲ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಣಕು ಮೃತ ದೇಹ ಸುಟ್ಟು ಪ್ರತಿಭಟನಾಕಾರರ ಅಕ್ರೋಶ

ವಾರ್ತಾಭಾರತಿವಾರ್ತಾಭಾರತಿ8 Jan 2025 6:06 PM IST
share
Photo of Protest

ಕಲಬುರಗಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆ ಖಂಡಿಸಿ ಸಂವಿಧಾನ ರಕ್ಷಣಾ ಹೋರಾಟ ಸಮಿತಿ ಬುಧವಾರ ಕರೆ ನೀಡಿದ 'ಕಾಳಗಿ ಬಂದ್' ಯಶಸ್ವಿಯಾಯಿತು. ಪ್ರತಿಭಟನೆಯಲ್ಲಿ ಅಮಿತ್ ಶಾ ಅಣಕು ಶವಯಾತ್ರೆ ನಡೆಸಿ, ಭಾವಚಿತ್ರ ಪ್ರತಿಕೃತಿ ದಹಿಸಲಾಯಿತು.

ಸಂವಿಧಾನ ರಕ್ಷಣಾ ಹೋರಾಟ ಸಮಿತಿ ಕರೆ ನೀಡಿದ್ದ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದರು. ಬೆಳಿಗ್ಗೆ 6 ರಿಂದ ಪ್ರತಿಭಟನೆ ಆರಂಭಿಸಿದ ಹೋರಾಟಗಾರರು, ಮಧ್ಯಾಹ್ನ 4 ಗಂಟೆವರೆಗೆ ಪಾದಯಾತ್ರೆ, ಅಮಿತ್ ಶಾ ಅಣಕು ಶವಕ್ಕೆ ಹಾಗೂ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಬಂದ್ ಶಾಂತಿಯುತವಾಗಿ ನಡೆಯಿತು.

ಬೆಳ್ಳಿಗೆಯಿಂದಲೇ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಚ್ಚಿ ಬಂದ್ಗೆ ಬೆಂಬಲಿಸಿದರು. ಸಾರಿಗೆ ಸಂಸ್ಥೆಯ ಬಸ್ಗಳ ಸಂಚಾರ ಸ್ಥಗಿತಗೊಂಡಿತ್ತು. ಬಸ್ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಪರದಾಡುತ್ತಿದ್ದ ದೃಶ್ಯಗಳು ಕಂಡು ಬಂದವು.

ಬೆಳಿಗ್ಗೆಯಿಂದ ವಿವಿಧ ಗ್ರಾಮಗಳಿಂದ ಆಗಮಿಸಿ ಹೋರಾಟಗಾರರು ಕೈಯಲ್ಲಿ ನೀಲಿ ಬಾವುಟ, ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದುಕೊಂಡು ಗಮನ ಸೆಳೆದರು.

ಕಾಳಗಿ ಪಟ್ಟಣದ ಹಳೆ ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತದ ಮುಖ್ಯರಸ್ತೆ ಮೇಲೆ ಟೈರ್ಗೆ ಬೆಂಕಿ ಹಚ್ಚಿ 'ಜೈಭೀಮ್' ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಹಲಗಿ ತಾಳಕ್ಕೆ ಹೆಜ್ಜೆ ಹಾಕಿದ ಹೋರಾಟಗಾರರು 'ಸತ್ತಾನಪ್ರೊ ಸತ್ತಾನೊ ಅಮಿತ್ ಶಾ ಸತ್ತಾನೋ' ಎಂಬ ಘೋಷಣೆ ಕೂಗಿ ಬೊಬ್ಬೆ ಹಾಕಿದರು. ಮುಖ್ಯ ಬಜಾರ ಬಸವೇಶ್ವರ ವೃತ್ತದ ಮುಖಾಂತರ ಅಂಬೇಡ್ಕರ್ ವೃತ್ತದವರೆಗೆ ಅಮಿತ್ ಶಾ ಅಣಕು ಶವಯಾತ್ರೆ ಮಾಡಿದರು. ಅಂಬೇಡ್ಕರ್ ವೃತ್ತದ ಮುಖ್ಯರಸ್ತೆ ಮೇಲೆ ಅಮಿತ್ ಶಾ ಪ್ರತಿಕೃತಿ ದಹಿಸಿ ರಾಜೀನಾಮೆಗೆ ಒತ್ತಾಯಿಸಿದರು.

ಪ್ರತಿಭಟನೆ ಉದ್ದೇಶಿಸಿ ಕೆಪಿಸಿಸಿ ಉಪಾಧ್ಯಕ್ಷ ಸುಭಾಷ್ ರಾಠೋಡ, ಮಾಜಿ ಜಿಪಂ ಸದಸ್ಯ ಶಂಭುಲಿಂಗ ಗುಂಡಗುರ್ತಿ, ಮುಖಂಡರಾದ ಡಾ.ಮಲ್ಲಿಕಾರ್ಜುನ ಗಾಜರೆ, ರೇವಣಸಿದ್ದಪ್ಪ ಸಾತನೂರ, ಶಂಕರ ಹೇರೂರ, ಶರಣಬಸಪ್ಪ ಮಮಶೆಟ್ಟಿ ಮುಖಂಡರು ಮಾತನಾಡಿ, 'ರಾಜ್ಯಸಭೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿದ ಅಮಿತ್ ಶಾ ಅವರನ್ನು ಸಂಪುಟದಲ್ಲಿ ಮಂದುವರೆಯಲು ನೈತಿಕತೆ ಇಲ್ಲ. ದೇಶದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಲು ಕೂಡಲೇ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಿ ದೇಶದ್ರೋಹ ಪ್ರಕರಣ ದಾಖಲಿಸಬೇಕು' ಎಂದು ಆಗ್ರಹಿಸಿದರು.

'ಭಾರತೀಯ ಸಂವಿಧಾನದಿಂದಲೇ ಸಂಸತ್ ಪ್ರವೇಶಿಸಿ ಗೃಹ ಮಂತ್ರಿಯಾದ ಅಮಿತ್ ಶಾ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಅಪಮಾನಿಸಿದ್ದು ದೇಶದ ಕೋಟಿ ಕೋಟಿ ಅಂಬೇಡ್ಕರ್ ಅನುಯಾಯಿಗಳಿಗೆ ನೋವುಂಟು ಮಾಡಿದೆ. ಜಾತಿವಾದಿ ಮನಸ್ಥಿತಿಯ ಅಮಿತ್ ಶಾ ಅಧಿಕಾರದ ದರ್ಪದಿಂದ ಬಾಬಾ ಸಾಹೇಬ್ರನ್ನು ಅವಮಾನಿಸಿ ದೇಶದ್ರೋಹ ಕೃತ್ಯ ಎಸಗಿದ್ದಾರೆ. ತಕ್ಷಣವೇ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು' ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಈ ಹಿಂದೆ ಬಿಜೆಪಿಯವರು ದೇಶದ ಸಂವಿಧಾನ ಬದಲಾಯಿಸಲು ಬಂದಿದ್ದೇವೆ ಎಂಬ ಹೇಳಿಕೆ ನೀಡಿದ್ದರು. ಆ ಕಾರಣದಿಂದಲೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅನೇಕ ಕ್ಷೇತ್ರಗಳಲ್ಲಿ ಸೀಟು ಕಳೆದುಕೊಳ್ಳಬೇಕಾಯಿತು. ಸದಾ 'ಸಬ್ ಕಾ ಸಾತ್ ಸಬ್ ಕಾ ವಿಕಾಸ' ಎನ್ನುವ ಪ್ರಧಾನಿ ಮೋದಿಯವರು ಸಂಸತ್ತಿನಲ್ಲಿ ಡಾ.ಅಂಬೇಡ್ಕರ್ ಅವರನ್ನು ಅಪಮಾನಿಸಿದ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಿ, ಪಕ್ಷದಿಂದ ಉಚ್ಚಾಟಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳು ನಿಮನ್ನು ಸಂಸತ್ ಭವನ ಪ್ರವೇಶಿಸಲು ಬಿಡುವುದಿಲ್ಲ' ಎಂದು ಎಚ್ಚರಿಸಿದರು.

ಪ್ರತಿಭಟನೆ ನಂತರ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಘಮಾವತಿ ರಾಠೋಡ ಅವರಿಗೆ ಸಲ್ಲಿಸಿದರು.

ಸಂವಿಧಾನ ರಕ್ಷಣಾ ಹೋರಾಟ ಸಮಿತಿಯ ಮುಖಂಡರಾದ ಕಲ್ಯಾಣರಾವ ಡೊಣ್ಣೂರ, ಯುವ ಮುಖಂಡ ನೀಲಕಂಠ ಜಗದೇವ ಗುತ್ತೇದಾರ, ರಾಘವೇಂದ್ರ ಗುತ್ತೇದಾರ, ಪ್ರವೀಣ ಟಿ.ಟಿ, ದೇವಿಂದ್ರ ಹೆಬ್ಬಾಳ, ಶರಣು ಮಜ್ಜಿಗಿ, ಕಾಶಿನಾಥ ಬಂಡಿ, ಗುರುನಂದೇಶ ಕೊಣಿನ್, ಪ್ರಕಾಶ ಮೇಲ್ಕೇರಿ, ಮಲ್ಲಿಕಾರ್ಜುನ ಗಂವಾರ್, ಗೌರಿಶಂಕರ ಗುತ್ತೇದಾರ, ಪ್ರಕಾಶ ಮೂಲಭಾರತಿ, ರಮಾ ದೊಡ್ಡಮನಿ, ಪುರುಷೋತ್ತಮ ಗುತ್ತೇದಾರ, ಪ್ರದೀಪ ಡೊಣ್ಣೂರ, ಪ್ರವೀಣ್ ನಾಮದಾರ, ಅವಿನಾಶ್ ಮೂಲಿಮನಿ, ಮೋಹನ ಚಿನ್ನ, ರೇವಣಸಿದ್ದಪ್ಪ ಕಟ್ಟಿಮನಿ, ಕಾಶಿನಾಥ ಶೆಳ್ಳಗಿ, ಭರತ ಬುಳ್ಳಾ, ಸಂತೋಷ ನರನಾಳ, ಮಾರುತಿ ಮಳಗಿ, ಮಹೇಂದ್ರ ಕೊಳ್ಳಿ, ಆನಂದ ಜಾಧವ್, ರೇವಣಸಿದ್ದಪ್ಪ ಅರಣಕಲ್, ಪ್ರಶಾಂತ ರಾಜಾಪೂರ, ಗಣಪತಿ ಹಾಳಕಾಯಿ, ಶಿವಕುಮಾರ್ ಚಿಂತಕೊಟಿ, ನಾಗರಾಜ ಸಜ್ಜನ, ಗುಂಡಪ್ಪ ಮಾಳಗಿ, ಸಾಗರ ಮಾವಿನಸೂರ, ಮನೋಜ ಕೊಟನೂರ, ಪರಮೇಶ್ವರ ಕಟ್ಟಿಮನಿ, ಮಾಣಿಕ್ ಜಾಧವ್ ಸೇರಿದಂತೆ ವಿವಿಧ ಸಂಘಟನೆ ಮುಖಂಡರು ಹಾಗೂ ಅಂಬೇಡ್ಕರ್ ಅನುಯಾಯಿಗಳು ಇದ್ದರು.

ಕಾಳಗಿ ಸಿಪಿಐ ಜಗದೇವಪ್ಪ ಪಾಳ, ಮಾರ್ಗದರ್ಶನದಲ್ಲಿ ಪಿಎಸ್ಐ ತಿಮ್ಮಯ್ಯ ಬಿಕೆ ಪೊಲಿಸ್ ಬಿಗಿ ಬಂದೋಬಸ್ತ್ ಒದಗಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X