ಕಲಬುರಗಿ ಠಾಣೆಯಲ್ಲಿ ಜೂಜಾಟ ಪ್ರಕರಣ| ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ : ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಪ್ರಿಯಾಂಕ್ ಖರ್ಗೆ
ಕಲಬುರಗಿ : ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ಜೂಜಾಟದ ವಿಡಿಯೋ ಗಮನಕ್ಕೆ ಬಂದ ತಕ್ಷಣವೇ ಈ ಕುರಿತು ವಿಚಾರಣೆ ನಡೆಸಿ ಅಗತ್ಯ ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೆ, ಈ ಬಗ್ಗೆ ವಿಚಾರಣೆ ನಡೆಸಿದಾಗ ಇದು ಹಲವು ತಿಂಗಳ ಹಿಂದೆ ನಡೆದ ಘಟನೆ ಎನ್ನುವುದು ತಿಳಿದು ಬಂದಿರುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಜೂಜಾಟದಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಹಾಗೂ ಠಾಣೆಯ ಸಬ್ ಇನ್ಸ್ಪೆಕ್ಟರ್ ಗೆ ನೋಟಿಸ್ ಜಾರಿಗೊಳಿಸಲಾಗಿದೆ. ಯಾವುದೇ ಇಲಾಖೆಯ ಯಾವುದೇ ಸಿಬ್ಬಂದಿ, ಅಧಿಕಾರಿಗಳ ಶಿಸ್ತು ಉಲ್ಲಂಘನೆಯ ಬಗ್ಗೆ ನಮ್ಮ ಸರ್ಕಾರ ಶೂನ್ಯ ಸಹನೆ ಹೊಂದಿದೆ, ಸಾರ್ವಜನಿಕ ಸೇವೆಯಲ್ಲಿ, ಕಾನೂನು ಪಾಲನೆಯಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
Next Story