ಕಲಬುರಗಿ | ಬಸ್ ಪ್ರಯಾಣ ದರ ಹೆಚ್ಚಳ ನಿರ್ಧಾರ ಹಿಂಪಡೆಯಲು ವೆಲ್ಫೇರ್ ಪಾರ್ಟಿ ಆಗ್ರಹ
ಕಲಬುರಗಿ : ರಾಜ್ಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ರಾಜ್ಯ ಸರ್ಕಾರ ತನ್ನ ನಿರ್ಧಾರ ಕೂಡಲೇ ಹಿಂಪಡೆಯಬೇಕೆಂದು ವೆಲ್ಫೇರ್ ಪಾರ್ಟಿ ರಾಜ್ಯ ಕಾರ್ಯದರ್ಶಿ ಮುಬಿನ್ ಅಹ್ಮದ್ ಆಗ್ರಹಿಸಿದ್ದಾರೆ.
ದೇಶದಲ್ಲಿ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರುತ್ತಲೇ ಇದ್ದು, ಜನ ಸಂಕಷ್ಟದಲ್ಲಿ ಇದ್ದಾರೆ. ಇಂಥಹ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ನೆರವು ನೀಡುವ ಬದಲು ರಾಜ್ಯದಲ್ಲೂ ಬೆಲೆ ಏರಿಕೆ ಮಾಡಿ ಗಾಯದ ಮೇಲೆ ಬರೇ ಎಳೆಯುವ ಕೆಲಸ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಸ್ ಪ್ರಯಾಣ ದರ ಇದ್ದಕಿದ್ದಂತೆ ಶೇ.15 ಏರಿಕೆ ಮಾಡುವ ನಿರ್ಧಾರ ಖಂಡನಿಯ. ಗ್ಯಾರಂಟಿ ಯೋಜನೆಯಿಂದ ಆಗುವ ನಷ್ಟದ ಹೊರೆ ಜನರ ಮೇಲೆ ಯಾವುದೇ ಕಾರಣಕ್ಕೂ ಹಾಕಬಾರದು. ಯೋಜನೆ ನಡೆಸಲಿಕ್ಕೆ ಸಮರ್ಥ ಕಾರ್ಯತಂತ್ರ ರೋಪಿಸಬೇಕೆಂದು ಸಲಹೆ ನೀಡಿದ್ದಾರೆ.
Next Story