ಕಲಬುರಗಿ | ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ : ಸ್ವಾಗತ ಸಮಿತಿಯ ಗೌರವಾಧ್ಯಕ್ಷರಿಗೆ ಅಧಿಕೃತ ಆಹ್ವಾನ
ಕಲಬುರಗಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಜ.19 ರಂದು ಹಮ್ಮಿಕೊಂಡಿರುವ ಒಂದು ದಿನದ ಕಲಬುರಗಿ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಪೂರಕವಾಗಿ ರಚಿಸಲ್ಪಟ್ಟಿರುವ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಹಾಗೂ ಅಧ್ಯಕ್ಷರನ್ನಾಗಿ ಆಯ್ಕೆಗೊಂಡಿರುವ ಆರ್.ಜೆ.ವಿಜ್ಞಾನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಹ್ಲಾದ ಬುರ್ಲಿ ಹಾಗೂ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಸೋಮಶೇಖರ ಗೋನಾಯಕ್ ಅವರನ್ನು ಅಧಿಕೃತವಾಗಿ ಆಹ್ವಾನ ನೀಡಿ ಪರಿಷತ್ತಿನ ವತಿಯಿಂದ ಸತ್ಕರಿಸಲಾಯಿತು.
ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ನಾಡಿನ ಸಾಹಿತ್ಯ ಕ್ಷೇತ್ರಕ್ಕೆ ಮಹಿಳೆಯರು ಕೊಟ್ಟ ಕೊಡುಗೆಯಿಂದ ಕನ್ನಡ ಸಾರಸ್ವತ ಲೋಕ ಶ್ರೀಮಂತಗೊoಡಿದೆ. ಸಂವೇದನಾಶೀಲ ಬರಹಗಳಿಂದ ಸಮಾಜಮುಖಿ ಚಿಂತನೆಗಳನ್ನು ಅಭಿವ್ಯಕ್ತಗೊಳಿಸಿ ಸಾಹಿತ್ಯ ರಚಿಸುತ್ತಿದ್ದಾರೆ. ಇಂಥ ಚಿಂತನ-ಮoಥನ ಕುರಿತು ಮುಕ್ತ ಚರ್ಚೆ ನಡೆಸಲು ಈ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪ್ರಮುಖರಾದ ಶಕುಂತಲಾ ಪಾಟೀಲ ಜಾವಳಿ, ಮಂಜುಳಾ ಜಾನೆ, ಮಂಜುನಾಥ ಕಂಬಾಳಿಮಠ, ರವಿಕುಮಾರ ಶಹಾಪುರಕರ್, ಪ್ರಭುಲಿಂಗ ಮೂಲಗೆ, ಹಣಮಂತ ಪ್ರಭು, ಸಂಗಪ್ಪ ಚೋರಗಸ್ತಿ, ಮಲ್ಲಿನಾಥ ಸಂಗಶೆಟ್ಟಿ, ಈರಣ್ಣ ಸೋನಾರ, ಶಿವಕುಮಾರ ಸಿ.ಎಚ್., ತಾರಾಚಂದ ಜೈನ್, ರಮೇಶ ಡಿ ಬಡಿಗೇರ, ಧರ್ಮರಾಜ ಜವಳಿ, ಸೈಯದ್ ನಜಿರುದ್ದೀನ್ ಮುತ್ತವಲಿ, ಡಾ.ರೆಹಮಾನ್ ಪಟೇಲ್, ರಾಜೇಂದ್ರ ಮಾಡಬೂಳ, ಬಾಬುರಾವ ಪಾಟೀಲ ಶಿವಾನಂದ ಸುರವಾಸಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.