ಕಲಬುರಗಿ | ಲಾರಿ ಹರಿದು ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಕಲಬುರಗಿ : ಲಾರಿ ಹರಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಎದರುಗಡೆ ನಡೆದಿದೆ.
ಮೃತ ವ್ಯಕ್ತಿಯನ್ನು ಮೊಗಲಾ ಗ್ರಾಮದ ನಿವಾಸಿ ಚಂದ್ರಪ್ಪ ಮಲಕಪ್ಪ(45) ಎಂದು ಗುರುತಿಸಲಾಗಿದೆ.
ಚಂದ್ರಪ್ಪ, ಚಿತ್ತಾಪುರ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು ಬರುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್ಐ ಶ್ರೀಶೈಲ್ ಅಂಬಾಟಿ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story