ಆಸ್ತಿಗಾಗಿ ಕಿರುಕುಳ ಆರೋಪ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
ಕಲಬುರಗಿ: ಆಸ್ತಿಗಾಗಿ ಕಿರುಕುಳ ನೀಡಿದ್ದರಿಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೇಡಂ ತಾಲ್ಲೂಕಿನ ಆರಬೊಮ್ಮನಹಳ್ಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಮೃತ ಯುವಕನನ್ನು ಬಸವಣ್ಣಪ್ಪ ಬಿರಾದಾರ್ ಎಂದು ಗುರುತಿಸಲಾಗಿದೆ. ಅ.19ರಂದು ಕ್ರಿಮಿನಾಶಕ ಕುಡಿದು ತೀವ್ರ ಅಸ್ವಸ್ಥಗೊಂಡ ಅವರನ್ನು ಸೇಡಂ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ವೈದ್ಯರ ಸಲಹೆಯ ಮೇರೆಗೆ ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಪತ್ನಿ ಮತ್ತು ಆಕೆಯ ಅಣ್ಣನು ಆಸ್ತಿಗಾಗಿ ಕಿರುಕುಳ ನೀಡಿದ್ದರಿಂದ ತನ್ನ ಪುತ್ರ ಕ್ರಿಮಿನಾಶಕ ಔಷಧಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಸಾವಿಗೆ ಪುತ್ರನ ಪತ್ನಿ ಗೌರಮ್ಮ ಹಾಗೂ ಆಕೆಯ ಅಣ್ಣ ಜಗನ್ನಾಥ್ ಕಾರಣ ಎಂದು ಮೃತ ಯುವಕನ ತಂದೆ ಚನ್ನಬಸಪ್ಪ ಬಿರಾದಾರ್ ಅವರು ಆರೋಪಿಸಿದ್ದಾರೆ.
Next Story