Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ...

ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದ ಮೋದಿ ದೇಶದ ಯುವ ಜನತೆಗೆ ವಂಚಿಸಿದರು : ಸಿಎಂ ಸಿದ್ದರಾಮಯ್ಯ

ʼನಾವು ಯುವ ನಿಧಿ ಜೊತೆಗೆ ಕೌಶಲ್ಯ, ಉದ್ಯೋಗವನ್ನು ಸೃಷ್ಟಿಸಿ ಬದುಕು ರೂಪಿಸುತ್ತಿದ್ದೇವೆʼ

ವಾರ್ತಾಭಾರತಿವಾರ್ತಾಭಾರತಿ16 April 2025 4:03 PM IST
share
ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದ ಮೋದಿ ದೇಶದ ಯುವ ಜನತೆಗೆ ವಂಚಿಸಿದರು : ಸಿಎಂ ಸಿದ್ದರಾಮಯ್ಯ

ಕಲಬುರಗಿ : ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದ ಮೋದಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಕೊಡದೆ ಪರಮ ಸುಳ್ಳು ಹೇಳಿ ಯುವ ಜನರನ್ನು ವಂಚಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಯುವಕ, ಯುವತಿಯರಿಗೆ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಯುವ ಪದವೀಧರರಿಗೆ ನೇಮಕಾತಿ ಪತ್ರವನ್ನು ವಿತರಿಸಿ ಮಾತನಾಡಿದರು.

ನಾವು ನುಡಿದಂತೆ ನಡೆಯುತ್ತಾ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಲ್ಲಿ ಯುವ ನಿಧಿ ಕಾರ್ಯಕ್ರಮ ಕೂಡ ಸೇರಿದೆ. ಭತ್ಯೆ ಜೊತೆಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವನ್ನೂ ಒದಗಿಸುತ್ತಿದ್ದೇವೆ ಎಂದರು.

ಮಾರುಕಟ್ಟೆ ಆಧಾರಿತ ಕೌಶಲ್ಯ ನೀಡಿ ಉದ್ಯೋಗ ಸೃಜಿಸಲು ಸಚಿವ ಶರಣಪ್ರಕಾಶ್ ಅವರಿಗೆ ಸೂಚಿಸಿದ್ದೇನೆ. ಹೀಗಾಗಿ ನೋಂದಾಯಿತರಾದ ಎಲ್ಲರಿಗೂ ಉದ್ಯೋಗ ಸಿಕ್ಕೇ ಸಿಗುತ್ತದೆ ಎಂದು ಭರವಸೆ ನೀಡಿದರು

ಉದ್ಯೋಗ ಕೊಡುವವರು, ಉದ್ಯೋಗ ಪಡೆಯುವವರನ್ನು ಒಟ್ಟಿಗೇ ಒಂದೇ ವೇದಿಕೆಯಲ್ಲಿ ತರುವ ಮೂಲಕ ಉದ್ಯೋಗಗಳನ್ನು ಒದಗಿಸುವುದಕ್ಕಾಗಿ ವಿಭಾಗಾವಾರು ಉದ್ಯೋಗಮೇಳಗಳನ್ನು ಸಂಘಟಿಸುತ್ತಿದ್ದೇವೆ ಎಂದರು.

ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಹೂಡಿಕೆ ಹೆಚ್ಚಾದಷ್ಟೂ ಉದ್ಯೋಗ ಸೃಷ್ಟಿ ಹೆಚ್ಚಾಗುತ್ತದೆ. ಕೇಂದ್ರ ಸರ್ಕಾರ ದೇಶದ ಯುವ ಜನತೆಯನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದೆ. ಆದರೆ ನಮ್ಮ ಸರ್ಕಾರ ಯುವ ಜನತೆಯ ಕೈಗೆ ಉದ್ಯೋಗ ನೀಡಿ ಅವರ ಬದುಕು ಕಟ್ಟುವ ಕೆಲಸ ಮಾಡುತ್ತಿದೆ ಎಂದರು.

ಅಜಯ್ ಸಿಂಗ್ KKRDB ಅಧ್ಯಕ್ಷರಾದ ಬಳಿಕ 5,000 ಕೋಟಿ ರೂ. ಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನು ಕಲ್ಯಾಣ ಕರ್ನಾಟಕದಲ್ಲಿ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X