ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಪ್ರವೇಶಕ್ಕೆ ಪೊಲೀಸರಿಂದ ತಡೆ
ಕಲಬುರಗಿ : ಚಿತ್ತಾಪುರದಲ್ಲಿ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಚಕ್ರವರ್ತಿ ಸೂಲಿಬೆಲೆಗೆ ಕಮಲಾಪುರದ ಕಿಣ್ಣಿ ಸಡಕ್ ಬಳಿ ಬುಧವಾರ ಮಧ್ಯರಾತ್ರಿ ಪೊಲೀಸರು ಜಿಲ್ಲೆಯನ್ನು ಪ್ರವೇಶಿಸದಂತೆ ತಡೆಯೊಡ್ಡಿ ವಾಪಸ್ ಕಳುಹಿಸಿದರು.
ಸೂಲಿಬೆಲೆ ಅವರು ಜಿಲ್ಲೆ ಪ್ರವೇಶಿಸಿದರೆ ಪ್ರಚೋದನಕಾರಿ ಭಾಷಣದಿಂದ ಶಾಂತಿಗೆ ಧಕ್ಕೆಯಾಗುವ ಸಾಧ್ಯತೆ, ಕಾನೂನು ಸುವ್ಯವಸ್ಥೆ ಹಾಳಾಗಬಹುದು ಎಂಬ ನಿಟ್ಟಿನಲ್ಲಿ ಕಲಬುರಗಿ ಉಪ ವಿಭಾಗಾಧಿಕಾರಿ ರೂಪೇಂದ್ರ ಕೌರ್ ಆದೇಶ ಹೊರಡಿಸಿದ್ದಾರೆ. ಫೆ.29 ರಿಂದ ಮಾರ್ಚ 4ರವರೆಗೆ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ಅದೇಶದಲ್ಲಿ ತಿಳಿಸಲಾಗಿದೆ.
ಸೂಲಿಬೆಲೆ ಅವರನ್ನು ಮಧ್ಯರಾತ್ರಿ 12 ಗಂಟೆ ವೇಳೆಗೆ ತಡೆದ ಕಮಲಾಪುರದ ಕಿಣ್ಣಿ ಸಡಕ್ ಪೊಲೀಸರು, ಆದೇಶದ ಹಿನ್ನಲೆಯಲ್ಲಿ ಜಿಲ್ಲೆಯೊಳಗೆ ಪ್ರವೇಶಕ್ಕೆ ಅವಕಾಶ ನೀಡದೆ ಮರಳಿ ಬೀದರ್ ಕಡೆಗೆ ಕಳುಹಿಸಿದರು ಎಂದು ತಿಳಿದು ಬಂದಿದೆ.
Next Story