ಕಲಬುರಗಿ ಮರಳಿ ಕಾಂಗ್ರೆಸ್ ತೆಕ್ಕೆಗೆ : ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ
ಕಲಬುರಗಿ : ಜಿದ್ದಾಜಿದ್ದಿನ ಕಣವಾಗಿದ್ದ ಕಲಬುರಗಿ ಲೋಕಸಭಾ ಕ್ಷೇತ್ರ ಸದ್ಯ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಬಿಜೆಪಿಯ ಉಮೇಶ್ ಜಾಧವ್ ವಿರುದ್ಧ 652321 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಸೋಲಿಲ್ಲದ ಸರದಾರನಂತೆ ಮಲ್ಲಿಕಾರ್ಜುನ ಖರ್ಗೆ ಪ್ರತಿ ಚುನಾವಣೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿಕೊಂಡು ಬಂದಿದ್ದರು. ಆದರೆ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಲ್ಲಿದ್ದ ಉಮೇಶ್ ಜಾಧವ್ ಅವರನ್ನು ಆಪರೇಷನ್ ಕಮಲ ಮಾಡುವ ಮೂಲಕ ಬಿಜೆಪಿಗೆ ಕರೆತರಲಾಗಿತ್ತು. ಅಷ್ಟೇ ಅಲ್ಲದೇ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಉಮೇಶ್ ಜಾಧವ್ ಗೆಲುವು ಕೂಡ ದಾಖಲಿಸಿದ್ದರು. ಆದರೆ, ಈ ಭಾರಿ ಉಮೇಶ್ ಅವರನ್ನು ರಾಧಾಕೃಷ್ಣ ದೊಡ್ಡಮನಿ ಸೋಲಿಸುವ ಮೂಲಕ ತಮ್ಮ ಮಾವನ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ.
Next Story