ಕಲಬುರಗಿ | ಕ್ಷುಲ್ಲಕ ಕಾರಣ: ಬಾಮೈದನಿಂದ ಬಾವನಿಗೆ ಚೂರಿ ಇರಿತ

ಸಾಂದರ್ಭಿಕ ಚಿತ್ರ
ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಬಾವವನ್ನು ಬಾಮೈದ(ಪತ್ನಿಯ ಸೋದರ)ನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಗರದ ಗಾಝಿಪುರದಲ್ಲಿ ನಡೆದಿದೆ.
ಆನಂದ್ ಚೂರಿ ಇರಿತಕ್ಕೆ ಒಳಗಾದ ವ್ಯಕ್ತಿ. ತೀವ್ರ ಗಾಯಗೊಂಡ ಆನಂದರನ್ನ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಿಸಲಾಗಿದೆ
ಆನಂದರ ಪತ್ನಿಯ ಸಹೋದರ ಟೋನಿ ಕೊಲೆ ಆರೋಪಿಯಾಗಿದ್ದು, ಆತನ ವಿರುದ್ಧ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆನಂದ್, ಎರಡು ವರ್ಷದ ಹಿಂದೆ ಸ್ನೇಹಾ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದರು. ಬಳಿಕ ಗಂಡ ಹೆಂಡತಿಯ ಮಧ್ಯೆ ಜಗಳವಾಗಿ ಸ್ನೇಹಾ ತವರು ಮನೆ ಸೇರಿದ್ದಳು. ಇದೀಗ ಆನಂದ್ ತನ್ನ ಅಣ್ಣನ ಮದುವೆ ಹಿನ್ನೆಲೆಯಲ್ಲಿ ಮನೆಗೆ ಬರುವಂತೆ ಸ್ನೇಹಾರನ್ನು ಕರೆಯಲು ತೆರಳಿದ್ದರು.. ಇದೇ ವೇಳೆ ಟೋನಿ ಮತ್ತು ಆತನ ಸ್ನೇಹಿತರು ಸೇರಿ ಆನಂದ್ ಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾರೆ ಎಂದು ದೂರಲಾಗಿದೆ.
ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story