ಕಲಬುರಗಿ: ನಿಯಮ ಉಲ್ಲಂಘಿಸಿ ಹೆಚ್ಚಿನ ಬಡ್ಡಿ ವಿಧಿಸಿದ್ದಲ್ಲಿ ದೂರು ನೀಡಲು ಸೂಚನೆ
ಕಲಬುರಗಿ; ಜಿಲ್ಲೆಯಲ್ಲಿ ನಿಯಮ ಉಲ್ಲಂಘಿಸಿ ಹೆಚ್ಚುವರಿ ಬಡ್ಡಿ ವಿಧಿಸುತ್ತಿರುವ ಲೇವಾದೇವಿದಾರರು ಹಾಗೂ ಗಿರವಿದಾರರರು ವಿರುದ್ಧ ಸಾರ್ವಜನಿಕರು ಈ ಕೆಳಕಂಡ ಅಧಿಕಾರಿಗಳಿಗೆ ದೂರು ನೀಡಬಹುದಾಗಿದೆ ಎಂದು ಕಲಬುರಗಿ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.
ಜಿಲ್ಲೆಯ ಲೇವಾದೇವಿದಾರರು ಹಾಗೂ ಗಿರವಿದಾರರರು ಕರ್ನಾಟಕ ಲೇವಾದೇವಿದಾರರ ಅಧಿನಿಯಮ 1961 ಮತ್ತು ಕರ್ನಾಟಕ ಗಿರವಿದಾರರ ಅಧಿನಿಯಮ 1961ರಡಿ ಪರವಾನಿಗೆ ಪಡೆದ ಪರವಾನಗಿದಾರರು ಸರಕಾರದ ದಿನಾಂಕ: 28-08-2003 ರನ್ವಯ ಅಧಿಸೂಚನೆಯನ್ವಯ ಭದ್ರತೆ ಸಾಲಗಳಿಗೆ ಗರಿಷ್ಠ ವಾರ್ಷಿಕ ಶೇ. 14 ರಷ್ಟು ಹಾಗೂ ಭದ್ರತೆ ಇಲ್ಲದೇ ಇರುವ ಸಾಲಗಳಿಗೆ ಗರಿಷ್ಠ ವಾರ್ಷಿಕ ಶೇ. 16 ರಷ್ಟು ಮಾತ್ರ ಬಡ್ಡಿ ವಿಧಿಸಬೇಕು ಎಂದು ತಿಳಿಸಿದ್ದಾರೆ.
ಸಹಾಯವಾಣಿ: ಕಲಬುರಗಿ ವಿಭಾಗದ ಸಹಕಾರ ಸಂಘಗಳ ಜಂಟಿ ನಿಬಂಧಕರ ಕಚೇರಿ ಮೊಬೈಲ್ ಸಂಖ್ಯೆ-9448813536, ಕಲಬುರಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಾಲಯ-9902777816, ಕಲಬುರಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರ (ಕಲಬುರಗಿ, ಆಳಂದ, ಅಫಜಲಪುರ, ಜೇವರ್ಗಿ, ಕಮಲಾಪುರ, ಯಡ್ರಾಮಿ ತಾಲೂಕುಗಳಿಗೆ ಸಂಬಂಧಿಸಿದಂತೆ) ಕಚೇರಿಯ- 9986377522 ಹಾಗೂ ಸೇಡಂ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಾರ್ಯಾಲಯ (ಸೇಡಂ, ಚಿತ್ತಾಪುರ, ಚಿಂಚೋಳಿ, ಕಾಳಗಿ ಹಾಗೂ ಶಹಾಬಾದ ತಾಲೂಕುಗಳಿಗೆ ಸಂಬಂಧಿಸಿದಂತೆ)-8861875737 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.