ಪಿ. ನಂದಕುಮಾರ್ ಗೆ ಕೇಂದ್ರೀಯ ವಿವಿಯಿಂದ ಪಿಎಚ್ಡಿ ಪದವಿ
ಪಿ.ನಂದಕುಮಾರ್
ಕಲಬುರಗಿ: ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿ ಹಾಗೂ ಸಿಯುಕೆ ಅಂಬೇಡ್ಕರ್ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾದ ಪಿ.ನಂದಕುಮಾರ್ ಅವರು ಪಿಎಚ್ ಡಿ ಪದವಿ ಪಡೆದಿದ್ದಾರೆ ಎಂದು ಕೇಂದ್ರೀಯ ವಿವಿಯ ಪರೀಕ್ಷಾ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಪಿ. ನಂದಕುಮಾರ್ ಅವರು ಕನ್ನಡ ವಿಷಯದಲ್ಲಿ "ದಲಿತ ಚಳುವಳಿಯ ಅನುಭವ ಕಥನ" (ಗುಲ್ಬರ್ಗ ಜಿಲ್ಲೆಯನ್ನು ಅನುಲಕ್ಷಿಸಿ) ಎಂಬ ವಿಷಯದ ಕುರಿತು ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಅಪ್ಪಗೆರೆ ಸೋಮಶೇಖರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಮಂಡಿಸಿದರು.
ಈ ಹಿನ್ನೆಲೆಯಲ್ಲಿ ಅವರಿಗೆ ಸಾದರಪಡಿಸಿದ ಸಂಶೋಧನಾ ಮಹಾಪ್ರಬಂಧವನ್ನು ಅಂಗೀಕರಿಸಿ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ ಎಂದು ಆದೇಶದಲ್ಲಿ ತಿಳಿಸಿದೆ.
Next Story