ಕಲಬುರಗಿ | ವಿಭಾಗೀಯ ಮಟ್ಟಕ್ಕೆ ಆಯ್ಕೆಯಾದ ವಿ.ಜಿ.ವಿಮೆನ್ಸ್ ಕಾಲೇಜಿನ ವಿದ್ಯಾರ್ಥಿನಿಯರು
ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆ ಹಾಗೂ ಉಪನಿರ್ದೇಶಕರು, ಜಿಲ್ಲಾ ಮಟ್ಟದ ಪದವಿ-ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ಚಟುವಟಿಕೆ ಸ್ಪರ್ಧೆಗಳನ್ನು ನ.21ರಂದು ಎಂ.ಪಿ.ಎಚ್.ಎಸ್. ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಈ ಸ್ಪರ್ಧೆಗಳಲ್ಲಿ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಭಾಗವಹಿಸಿ ಜಿಲ್ಲಾಮಟ್ಟದ ಚರ್ಚಾಸ್ಪರ್ಧೆಯಲ್ಲಿ ಫಾಯಜಾ ಖಾನಂ (ದ್ವಿತೀಯ ಕಲಾ ವಿಭಾಗ) ಪ್ರಥಮ ಬಹುಮಾನ, ಹುದಾ (ಪ್ರಥಮ ವಾಣಿಜ್ಯ ವಿಭಾಗ) ತೃತೀಯ ಬಹುಮಾನ ಪಡೆದಿದ್ದಾರೆ. ಫೈನ್ ಆರ್ಟನಲ್ಲಿ ಅಮುಲ್ಯಾ (ಪ್ರಥಮ ಕಲಾ ವಿಭಾಗ) ದ್ವಿತೀಯ ಬಹುಮಾನ, ಆಶುಭಾಷಣ ಸ್ಪರ್ಧೆಯಲ್ಲಿ ಮದಿಹಾ ರಜಾ (ದ್ವಿತೀಯ ಕಲಾ ವಿಭಾಗ) ದ್ವಿತೀಯ ಬಹುಮಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯರ ಈ ಸಾಧನೆಗೆ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅದ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು, ಕಾಲೇಜಿನ ಪ್ರಾಚಾರ್ಯರಾದ ಡಾ.ಮೋಹನರಾಜ ಪತ್ತಾರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಂಯೋಜಕರಾದ ಶೈಲಜಾ ನಾಕೆದಾರ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ ಎಂದು ಉಪನ್ಯಾಸಕರಾದ ಡಾ. ಕಾಶಿಬಾಯಿ ಭೋಗಶಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.