ಕೋಮು ಸೌಹಾರ್ದಕ್ಕೆ ಧಕ್ಕೆ ತರುವ 21 ಪ್ರಕರಣಗಳು ದಾಖಲು: ಮಂಗಳೂರು ಕಮಿಷನರ್ ಕುಲದೀಪ್ ಕುಮಾರ್ ಜೈನ್
ʼವಾಟ್ಸ್ಆ್ಯಪ್, ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವೀಟರ್ಗಳಲ್ಲಿ ಪೋಸ್ಟ್, ಫಾರ್ವರ್ಡ್, ಪ್ರತಿಕ್ರಿಯೆ ನೀಡುವುದನ್ನು ಇಲಾಖೆ ಗಮನಹರಿಸಿದೆʼ
ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್
ಮಂಗಳೂರು, ಜು.11: ನಗರದ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ 21 ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಾದ ವಾಟ್ಸ್ಆ್ಯಪ್, ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವೀಟರ್ಗಳಲ್ಲಿ ಧರ್ಮಗಳ ವಿಚಾರದಲ್ಲಿ ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತಹ ಅಂಶಗಳ ಸಂದೇಶವನ್ನು ಪೋಸ್ಟ್ ಮಾಡುವುದು, ಫಾರ್ವರ್ಡ್ ಮಾಡುವುದು, ಪ್ರತಿಕ್ರಿಯೆ ನೀಡುವುದನ್ನು ಇಲಾಖೆ ಗಮನಹರಿಸಿದೆ. ಅಲ್ಲದೆ ಕಳೆದೊಂದು ತಿಂಗಳ ಅವಧಿಯಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ.
ಈ ಬಗ್ಗೆ ನಗರದ ಎಲ್ಲಾ ಪೊಲೀಸ್ ಠಾಣೆಗಳ ಸೋಶಿಯಲ್ ಮೀಡಿಯಾ ಸೆಲ್ನಲ್ಲಿ ನಿಗಾ ವಹಿಸಲಾಗುತ್ತದೆ. ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
Next Story