ಬಶೀರ್, ನೌಶೀನ್, ಜಲೀಲ್ ಕುಟುಂಬಕ್ಕೆ ಪರಿಹಾರ ಆಗ್ರಹಿಸಿ ಸಚಿವರನ್ನು ಭೇಟಿ ಮಾಡಿದ ನಿಯೋಗ
ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ಕೋಮು ದ್ವೇಷಕ್ಕೆ ಬಲಿಯಾದ ಬಶೀರ್, ಪೊಲೀಸ್ ಗೋಲಿಬಾರ್ನಲ್ಲಿ ಮೃತಪಟ್ಟ ಅಮಾಯಕರಾದ ನೌಶೀನ್ ಮತ್ತು ಜಲೀಲ್ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕೆ.ಅಶ್ರಫ್ ನೇತೃತ್ವದ ಮುಸ್ಲಿಮ್ ಒಕ್ಕೂಟ ನಿಯೋಗ,ಮೃತರ ಕುಟುಂಬ ಸದಸ್ಯರೊಂದಿಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಸಂತ್ರಸ್ತ ಕುಟುಂಬವು ಪರಿಹಾರ ಪಡೆಯಲು ಅರ್ಹವಾಗಿದೆ ಎಂಬುದರ ಬಗ್ಗೆ ಕೆ.ಅಶ್ರಫ್ ರವರು ಜಿಲ್ಲಾ ಉಸ್ತುವಾರಿ ಸಚಿವರಿಗೆ ವಿವರಿಸಿದರು.
ನಿಯೋಗದಲ್ಲಿ ಅಬ್ದುಲ್ ಜಲೀಲ್ ಅದ್ದು ಕೃಷ್ಣಾಪುರ, ಅಶ್ರಫ್ ಬದ್ರಿಯಾ, ಸಿ. ಎಮ್.ಮುಸ್ತಾಫಾ, ಷರೀಫ್, ಸಿರಾಜ್,ಹಕೀಮ್,ಶರೀಫ್ ಕೂಳೂರು, ನೌಫಲ್ ಮತ್ತು ಅರ್ಷದ್ ಕಂದಕ್ ಮತ್ತು ಸಂತ್ರಸ್ತ ಕುಟುಂಬ ಸದಸ್ಯರು ಉಪಸ್ಥಿತರಿದ್ದರು
Next Story