ವಿಪ್ರ ಸಮಾಜದ ಸಂಸ್ಕಾರ, ಸಂಸ್ಕೃತಿ ಬಗ್ಗೆ ಉಪನ್ಯಾಸ
ಉಡುಪಿ: ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ರಜತ ಮಹೋತ್ಸವದ ಅಂಗವಾಗಿ ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯ ನೇತೃತ್ವದಲ್ಲಿ ಕರಂಬಳ್ಳಿ ಶ್ರೀವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ವಿಪ್ರ ಸಮಾಜದ ಸಂಸ್ಕೃತಿ, ಸಂಸ್ಕಾರ, ಸಮಸ್ಯೆಗಳು ಹಾಗೂ ಪರಿಹಾರದ ಕುರಿತು ಉಪನ್ಯಾಸ ಹಾಗೂ ಚರ್ಚೆ ಗೋಷ್ಠಿ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಕೃಷ್ಣ ಉಪಾಧ್ಯಾಯ ಪುತ್ತೂರು ಹಾಗೂ ಅಕ್ಷಯ ಗೋಖಲೆ ಕಾರ್ಕಳ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಯಾಗಿ ಮಾಜಿ ಶಾಸಕ ಕೆ.ರಘುಪತಿ ಭಟ್ ಶುಭ ಹಾರೈಸಿದರು. ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಮಂಜುನಾಥ ಉಪಾಧ್ಯಾಯ ಅಧ್ಯಕ್ಷತೆ ವಹಿಸಿದ್ದರು.
ರಜತ ಮಹೋತ್ಸವದ ಕಾರ್ಯಧ್ಯಕ್ಷ ಎಂ.ಶ್ರೀನಿವಾಸ ಬಲ್ಲಾಳ್ ಕಾರ್ಯಕ್ರಮ ನಿರೂಪಿಸಿ, ಪ್ರಸ್ತಾವನೆಗೈದರು. ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ಅಧ್ಯಕ್ಷ ಕೀಳಂಜೆ ಕೃಷ್ಣರಾಜ ಭಟ್ ಸ್ವಾಗತಿಸಿ, ಕಾರ್ಯದರ್ಶಿ ನಾಗರಾಜ ಭಟ್ ವಂದಿಸಿದರು.
ತಾಲೂಕು ಮಹಾಸಭಾದ ಪ್ರಧಾನ ಕಾರ್ಯದರ್ಶಿ ಸಂದೀಪ್ ಮಂಜ, ರಜತ ಮಹೋತ್ಸವದ ಕಾರ್ಯದರ್ಶಿ ಬೈಲೂರು ಜಯರಾಮ ಆಚಾರ್, ಶ್ರೀರಂಗನಾಥ ಸಾಮಗ ಉಪಸ್ಥಿತರಿದ್ದರು.