ಎಪಿಎಂಸಿ ಕಾಯ್ದೆಯ ತಿದ್ದುಪಡಿಗೆ ಸ್ವಾಗತ: ಅಹ್ಮದ್ ಬಾವ ಪಡೀಲ್
ಸಾಂದರ್ಭಿಕ ಚಿತ್ರ
ಮಂಗಳೂರು: ರೈತರಿಗೆ, ಗ್ರಾಹಕರಿಗೆ, ಖರೀದಿದಾರರಿಗೆ ಅನುಕೂಲವಾಗುವಂತೆ ರಾಜ್ಯ ಸರಕಾರವು 14ನೆ ಬಜೆಟ್ನಲ್ಲಿ ನೀಡಿದಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿರುವುದು ಸ್ವಾಗತಾರ್ಹ ಎಂದು ಮಂಗಳೂರು ಎಪಿಎಂಸಿ ಮಾಜಿ ಸದಸ್ಯ ಎಂ. ಅಹ್ಮದ್ ಬಾವಾ ಪಡೀಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಚಿವ ಶಿವಾನಂದ ಪಾಟೀಲ್ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ ಎಂದಿರುವುದು ಶ್ಲಾಘನೀಯ. ಈ ಕಾನೂನು ಜಾರಿಯಾದರೆ ವ್ಯಾಪಾರಿಗಳು ನಿಗದಿಪಡಿಸಿದ ಸ್ಥಳದಲ್ಲೇ ವ್ಯಾಪಾರ ವಹಿವಾಟು ನಡೆಸಬೇಕು. ಎಪಿಎಂಸಿ ಕಾಯ್ದೆಯನ್ನು ಕೇಂದ್ರ ಸರಕಾರ ಹಿಂಪಡೆದಿದೆ. ರಾಜ್ಯ ಸರಕಾರವು ಈ ಪ್ರಕ್ರಿಯೆಯನ್ನು ಆರಂಭಿಸಿ ಮಾರುಕಟ್ಟೆಗಳ ಪ್ರಾಂಗಣದ ಒಳಗೆ ಜರಗುವ ವ್ಯಾಪಾರ ವಹಿವಾಟಿನ ಮೇಲೆ ನಿಯಂತ್ರಣ ಹೇರುವುದು, ರೈತ ಬೆಳೆಗಾರರ ಹಿತದೃಷ್ಟಿಯಿಂದ ಖಾಯಂಗೊಳಿಸುವುದು, ವ್ಯವಹಾರ ನಿಯಂತ್ರಣ ಮತ್ತು ಅಭಿವೃದ್ಧಿಯ ಅಧಿನಿಯಮಕ್ಕೆ ತಿದ್ದುಪಡಿ ತರಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
Next Story