ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಉಡುಪಿ, ಜು.5: ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಉಡುಪಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ತೆರವಿರುವ ಲೀಗಲ್ ಕಂ ಪ್ರೋಬೆಷನ್ ಆಫೀಸರ್ ಹಾಗೂ ಲೆಕ್ಕಿಗರು ತಲಾ 1 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಹೊಂದಿರುವ, ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಸರಕಾರಿ, ಎನ್ಜಿಓ ಹಾಗೂ ಕಾನೂನು ವಿಷಯಗಳೊಂದಿಗೆ ಕನಿಷ್ಟ 2 ವರ್ಷ ಕೆಲಸ ಮಾಡಿದ ಅನುಭವ ಮತ್ತು ಮಹಿಳೆಯರ ಹಾಗೂ ಮಕ್ಕಳ ಹಕ್ಕು ಮತ್ತು ರಕ್ಷಣೆ ಸಮಸ್ಯೆಗಳ ಕುರಿತು ತಿಳುವಳಿಕೆ ಹೊಂದಿರುವವರು ಲೀಗಲ್ ಕಂ ಪ್ರೋಬೆಷನ್ ಆಫೀಸರ್ ಹುದ್ದೆಗೆ ಹಾಗೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಾಣಿಜ್ಯ/ ಗಣಿತ ಶಾಸ್ತ್ರದಲ್ಲಿ ಪದವಿ, ಕೆಲಸ ಮಾಡಿದ ಕನಿಷ್ಠ ಒಂದು ವರ್ಷ ಅನುಭವ ಹಾಗೂ ಕಂಪ್ಯೂಟರ್ ಮತ್ತು ಟ್ಯಾಲಿ ಸಾಫ್ಟ್ವೇರ್ನ ಅನುಭವ ಹೊಂದಿರುವವರು ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜುಲೈ 13 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಡಿ.ಸಿ.ಆಫೀಸ್, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574964 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.