ವಿಟ್ಲ | ಆಟೋ ರಿಕ್ಷಾ ಪಲ್ಟಿ: ಚಾಲಕ ಮೃತ್ಯು
ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಅದರ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ.
ವಿಟ್ಲ, ಜೂ.27: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಅದರ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಮೃತರನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ.
ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ ಆಟೋ ರಿಕ್ಷಾದಲ್ಲಿ ಮಾಣಿಲ ಬಾವಲಿಮೂಲೆಗೆ ಬಂದಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಉರುಳಿಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸುದರ್ಶನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆನ್ನಲಾಗಿದೆ.
ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಅಲ್ಪಸ್ವಲ್ಪ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story