ಭಟ್ಕಳ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ; ಎಲೆಕ್ಟ್ರಾನಿಕ್ಸ್ ವಸ್ತುಗಳು ಬೆಂಕಿಗಾಹುತಿ
ಭಟ್ಕಳ: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಭಟ್ಕಳದ ಮಖ್ದೂಮ್ ಕಾಲೋನಿಯ ಮನೆಯೊಂದರಲ್ಲಿ ರವಿವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಎಲೆಕ್ಟ್ರಾನಿಕ್ ವಸ್ತುಗಳು, ಮೂರು ಕಪಾಟುಗಳು, ಹಾಸಿಗೆ, ಬೆಲೆಬಾಳುವ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.
ಘಟನೆಯ ಸಮಯದಲ್ಲಿ ಕುಟುಂಬ ಸದಸ್ಯರು ಮನೆಯಲ್ಲಿ ಇರದ ಕಾರಣ ಸುರಕ್ಷಿತರಾಗಿದ್ದಾರೆ ಎಂದು ವರದಿಯಾಗಿದೆ.
ಭಟ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಸಾಮಾಜಿಕ ಕಾರ್ಯಕರ್ತರ ಮುಹಮ್ಮದ್ ಸಾದಿಕ್ ಮಟ್ಟಾ ಅವರ ಸಹೋದರಿ ಮುಬಸ್ಶಿರಾ ಯೂಸುಫ್ ಅವರ ಮನೆಯೇ ಬೆಂಕಿಗಾಹುತಿಯಾಗಿದ್ದು ಹಿಂದಿನ ದಿನವಷ್ಟೆ ಮನೆಯ ಕುಟುಂಬದ ಸದಸ್ಯರು ತಮ್ಮ ಸಂಬಂಧಿಕರ ಮನೆಗೆ ಹೋಗಿದ್ದರು ಎಂದು ಹೇಳಲಾಗಿದೆ.
ಮನೆಯಿಂದ ಹೊಗೆ ಬರುತ್ತಿರುವುದನ್ನು ನೋಡಿದ ಅಕ್ಕಪಕ್ಕದ ನಿವಾಸಿಗಳು ತಕ್ಷಣ ಸಹಾಯಕ್ಕೆ ಬಂದರು. ಮೊದಲು ಮನೆಯಿಂದ ಗ್ಯಾಸ್ ಸಿಲಿಂಡರ್ ತೆಗೆದು ಪಂಪ್ ಸೆಟ್ ಮೋಟಾರ್ ಬಳಸಿ ಬೆಂಕಿಯನ್ನು ನಿಯಂತ್ರಿಸಿ ಮತ್ತಷ್ಟು ಹರಡುವುದನ್ನು ತಪ್ಪಿಸಿದರು. ಮಾಹಿತಿ ಪಡೆದ ಹೆಸ್ಕಾಂ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು.
........!
— BCCI Domestic (@BCCIdomestic) July 16, 2023
Presenting the winners of Duleep Trophy 2023 #WZvSZ | #DuleepTrophy | #Final pic.twitter.com/dJi1xDUdgX